ಗೋಕರ್ಣ : ಪ. ಪೂ.ಶ್ರೀ ಷ .ಬ್ರ . ಶ್ರೀಕಂಠ ಶಿವಾಚಾರ್ಯ ಮಹಾಸ್ವಾಮಿಗಳು ಶ್ರೀ ಬಮ್ಮಲಿಂಗೇಶ್ವರ ಬೃಹನ್ಮಠ, ರೇವೂರ, ಕಲ್ಬುರ್ಗಿ ಇವರು ಶ್ರೀ ಕ್ಷೇತ್ರ ಗೋಕರ್ಣದ ಶ್ರೀ ಮಹಾಬಲೇಶ್ವರ ದೇವಾಲಯದಲ್ಲಿ ಜರುಗುತ್ತಿರುವ “ಗೋಕರ್ಣ ಗೌರವ” ಕಾರ್ಯಕ್ರಮದಲ್ಲಿ ಭಾಗವಹಿಸಿ ಶ್ರೀ ಆತ್ಮಲಿಂಗ ಪೂಜೆ ನೆರವೇರಿಸಿದರು .

RELATED ARTICLES  ಬಿಜೆಪಿಯಿಂದ ಮನೆ-ಮನೆ ಸಂಪರ್ಕ ಅಭಿಯಾನದ ಕರಪತ್ರ ಬಿಡುಗಡೆ ಕಾರ್ಯಕ್ರಮ

ವ್ಯವಸಾಯ ಸೇವಾ ಸಹಕಾರಿ ಸಂಘದ ಮಾಜಿ ವ್ಯವಸ್ಥಾಪಕರಾದ ಶ್ರೀ ಜಿ.ವಿ.ಹೆಗಡೆ ಇವರು ದೇವಾಲಯದ ಪರವಾಗಿ ಪೂಜ್ಯರಿಗೆ ಫಲ ಸಮರ್ಪಿಸಿ , ಶಾಲು ಹೊದೆಸಿ, ತಾಮ್ರಪತ್ರ ಸ್ಮರಣಿಕೆ ನೀಡಿ, ಗೌರವ ಸಲ್ಲಿಸಿದರು . ಆಡಳಿತಾಧಿಕಾರಿ ಶ್ರೀ ಜಿ ಕೆ ಹೆಗಡೆ ಮತ್ತು ಉಪಾಧಿವಂತ ಮಂಡಳಿ ಸದಸ್ಯರು ಉಪಸ್ಥಿತರಿದ್ದರು. ವೇ. ಬಾಲಚಂದ್ರ ಶಾಸ್ತ್ರಿ ಕೊಡಗಿ ಪೂಜಾ ಕೈಂಕರ್ಯ ನೆರವೇರಿಸಿದರು

RELATED ARTICLES  ರಂಗಸಾರಸ್ವತದ ವಿನೂತನ ಪ್ರಯೋಗ ಶ್ಲಾಘನೀಯ : ಮುರಳೀಧರ ಪ್ರಭು