ಹೊನ್ನಾವರ : ತಾಲೂಕಿನ ಚಿಕ್ಕಾನಕೊಡಿನಲ್ಲಿರುವ ಶ್ರೀ ದುರ್ಗಾಂಬಾ ದೇವಿಯ 66ನ್ ವರ್ಷದ ವಾರ್ಷಿಕ ವರ್ದಂತೀ ಉತ್ಸವ ಅದ್ದೂರಿಯಾಗಿ ನಡೆಯಿತು. ದಾರ್ಮಿಕ ವಿಧಿ ವಿಧಾನಗಳಂತೆ ನಡೆದ ಮಹಾ ಪೂಜೆಯ ನಂತರ ಪ್ರತಿಭಾ ಪುರಸ್ಕಾರ ಹಾಗೂ ಸಭಾ ಕಾರ್ಯಕ್ರಮ ನಡೆಯಿತು.

ಸಭಾ ಕಾರ್ಯಕ್ರಮವನ್ನು ರಾಜ್ಯಸಭಾ ಸದಸ್ಯರು ಮತ್ತು ಎ.ಐ ಸಿ ಸಿ ಯ ಪ್ರದಾನ ಕಾರ್ಯದರ್ಶಿಗಳಾದ ಶ್ರೀ ಬಿ.ಕೆ ಹರಿಪ್ರಸಾದ್ ಇವರು ಉದ್ಘಾಟನೆ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಇಂತಹ ಕಾರ್ಐಕ್ರಮಗಳು ಗ್ರಾಮದ ಅಭಿವೃದ್ಧಿಗೆ ಅಗತ್ಯವಾಗಿದೆ ಎಂದರು.

RELATED ARTICLES  ಅಘನಾಶಿನಿ ಸಾಕ್ಷ್ಯಚಿತ್ರ ಬಿಡುಗಡೆಗೆ ಕ್ಷಣಗಣನೆ

ಕುಮಟಾ ಹೊನ್ನಾವರ ವಿಧಾನಸಭಾ ಕ್ಷೇತ್ರದ ಶಾಸಕಿ ಮತ್ತು ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀಮತಿ ಶಾರದಾ ಮೋಹನ ಶೆಟ್ಟಿಯವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಜನತೆ ಇಂತಹ ದೇವತಾ ಕಾರ್ಯಗಳಲ್ಲಿ ತೊಡಗಿ ನಾಡಿನ ಒಳಿತಿಗೆ ಶ್ರಮಿಸುತ್ತಿರುವುದು ಅತ್ಯುತ್ತಮ ಕಾರ್ಯವಾಗಿದೆ ಎಂದರು.

RELATED ARTICLES  ಉತ್ತರ ಕನ್ನಡದಲ್ಲಿ ಕೊರೋನಾಗೆ ಮತ್ತೊಂದು ಸಾವು : 35 ವರ್ಷದ ವ್ಯಕ್ತಿ ಕಾರವಾರದಲ್ಲಿ ಬಲಿ

ಕಾರ್ಯಕ್ರಮದಲ್ಲಿ ಊರಿನ ಹಿರಿಯರು, ಭಕ್ತರು ಹಾಗೂ ಸಾರ್ವಜನಿಕರು ಹಾಜರಿದ್ದರು.