ಮೈಸೂರಿನ ಹಣಸೂರಿನಲ್ಲಿ ಹನುಮ ಜಯಂತಿಯ ಮೆರವಣಿಗೆ ನಡೆಸಲು ಅವಕಾಶ ನೀಡಿಲ್ಲವೆಂದು ಸಂಸದ ಪ್ರತಾಪ ಸಿಂಹ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರವಿ ಡಿ ಚನ್ನಣ್ಣನವರ್ ವಿರುದ್ಧ ಟ್ವಿಟ್ಟರ್ ನಲ್ಲಿ ಕಿಡಿಕಾರಿದ್ದಾರೆ. ಸಂಸದ ಪ್ರತಾಪ ಸಿಂಹ ವಿರುದ್ಧ ಕ್ರಿಮಿನಲ್ ಕೇಸ್, ಡಿ.4 ಹುಣಸೂರು ಬಂದ್ “ಆಳುವವರ ಅಣತಿ ಮೀರುವಹಾಗಿಲ್ಲ ಅಲ್ವಾ ಸಾರ್?!

RELATED ARTICLES  ಹೊಸಾಕುಳಿ ಹಳ್ಳಿಗೊಂದು ಘನತೆ ತಂದ ಹುಡುಗಿಯರು ,ಸಾಧಕಿಯರಿಗೆ ಸನ್ಮಾನ ಕಾರ್ಯಕ್ರಮ ನಾಳೆ.

ಕನಿಷ್ಠ ಖಡಕ್ ಅಧಿಕಾರಿಗಳೆಂಬ ಸೋಗು ಬಿಟ್ಟು ಆಳುವ ಪಕ್ಷದ ಆಳುಗಳು ಅನ್ನುವುದನ್ನು ಒಪ್ಪಿಕೊಳ್ಳಿ. ದತ್ತ ಜಯಂತಿಗೆ ಸಕಲ ವ್ಯವಸ್ಥೆ ಮಾಡಿರುವ ಅಣ್ಣಾಮಲೈ, ಸರ್ಕಾರವನ್ನು ಎದುರುಹಾಕಿಕೊಂಡ ಡಿಐಜಿ ರೂಪ, ಮೆಡಿಕಲ್ ಸೀಟ್ ಬ್ಲಾಕಿಂಗ್ ಹಗರಣ ತಡೆದ ಐಎಎಸ್ ರಶ್ಮಿ ನೋಡಿ ಕಲಿಯಿರಿ, ಭಾಷಣ ನಿಲ್ಲಿಸಿ” ಎಂದು ಪ್ರತಾಪ ಸಿಂಹ ಟ್ವಿಟ್ಟರ್ ನಲ್ಲಿ ಪರೋಕ್ಷವಾಗಿ ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರವಿ ಡಿ ಚನ್ನಣ್ಣನವರ್ ವಿರುದ್ಧ ಹರಿಹಾಯ್ದರು.

RELATED ARTICLES  ರಾಜ್ಯಕ್ಕೂ ಕಾಲಿಟ್ಟ ಡೆಡ್ಲಿ ಬ್ಲೂವೇಲ್ ಗೇಮ್: ಕೈ ಕುಯ್ದುಕೊಂಡ 11ರ ಪೋರಿ!