ಕಾರವಾರ: ವಿಕಲಚೇತನರಿಗೆ ಅನುಕಂಪ ತೋರುವುದಕ್ಕಿಂತ ಅವರಿಗೆ ಅವಕಾಶ ಕಲ್ಪಿಸಿಕೊಡಲು ಎಲ್ಲರೂ ಪ್ರಯತ್ನಿಸಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಟಿ.ಗೋವಿಂದಯ್ಯ ಹೇಳಿದರು.

ಜಿಲ್ಲಾ ಪಂಚಾಯತ್, ಸಾರ್ವಜನಿಕ ಶಿಕ್ಷಣ ಇಲಾಖೆ, ಎಸ್.ಎಸ್.ಎ ಮತ್ತು ಆರ್.ಎಂ.ಎಸ್.ಎ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ತಾಲೂಕು ಯೋಜನಾ ಸಮನ್ವಯಾಧಿಕಾರಿಗಳ ಕಾರ್ಯಾಲಯ ಮತ್ತು ಕಾನೂನು ಸೇವೆಗಳ ಪ್ರಾಧಿಕಾರದ ಆಶ್ರಯದಲ್ಲಿ ನಡೆದ ವಿಶ್ವ ವಿಕಲಚೇತನ ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ವಿಕಲಚೇತನರನ್ನು ತಾತ್ಸಾರದಿಂದ ಕಾಣಬಾರದು. ಅದು ಅವರಿಗೆ ಪ್ರಕೃತಿಯೇ ನೀಡಿರುವ ವಿಶೇಷ ಹುಟ್ಟು. ಇಂತಹ ಮಕ್ಕಳೆ ಯಾರೂ ಮಾಡಿರದಂಥ ವಿಶೇಷ ಸಾಧನೆಗಳನ್ನು ಮಾಡುತ್ತಾರೆ ಎಂದು ಅವರ ಕಾರ್ಯ ಶ್ಲಾಘೀಸಿದರು.

RELATED ARTICLES  ಹೊನ್ನಾವರದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಅಸಮಾಧಾನ : ಸಭೆಯಲ್ಲಿಯೇ ಗದ್ದಲ..?

ಕಾರ್ಯಕ್ರಮದಲ್ಲಿ ಶಾಸಕ ಸತೀಶ್ ಸೈಲ್, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಚಂದ್ರಶೇಖರ ನಾಯಕ, ಕ್ಷೇತ್ರ ಶಿಕ್ಷಣಾಧಿಕಾರಿ ರಾಮಕೃಷ್ಣ ನಾಯಕ, ತಾಲ್ಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಶ್ರೀಕಾಂತ್ ಹೆಗಡೆ ಉಪಸ್ಥಿತರಿದ್ದರು.

RELATED ARTICLES  ಮೈಲಾರಲಿಂಗ ಜಾತ್ರೆಯಲ್ಲಿ ಶಸ್ತ್ರ ಪವಾಡ:ಬಾಯಿಗೆ ಶಸ್ತ್ರ ಚುಚ್ಚಿಕೊಳ್ಳುವುದನ್ನು ಕುತೂಹಲದಿಂದ ವೀಕ್ಷಿಸಿದ ಜನರು

ಕಾರ್ಯಕ್ರಮದಲ್ಲಿ ಆಶಾನಿಕೇತನ ಕಿವುಡ ಮತ್ತು ಮೂಕ ಮಕ್ಕಳ ವಸತಿ ಶಾಲೆಯ ವಿದ್ಯಾರ್ಥಿಗಳಿಂದ ನಡೆದ ನೃತ್ಯ ಕಾರ್ಯಕ್ರಮ ಎಲ್ಲರ ಗಮನ ಸೆಳೆಯಿತು. ಬಳಿಕ ತಾಲೂಕಿನ ವಿಕಲಚೇತನ ಮಕ್ಕಳಿಗಾಗಿ ಸಾಂಸ್ಕೃತಿಕ ಹಾಗೂ ಕ್ರೀಡಾ ಸ್ಪರ್ಧೆಗಳು ನಡೆದಿದ್ದು, ಇದರಲ್ಲಿ ವಿಕಲಚೇತನ ಮಕ್ಕಳ ಪೋಷಕರಿಗೂ ಕೂಡ ಸ್ಪರ್ಧಿಸಿದ್ದು ವಿಶೇಷವಾಗಿತು.