ಶಿರಸಿ: ಜಿಲ್ಲೆಯ 6 ಕ್ಷೇತ್ರಗಳಿಗೂ ಮುಖ್ಯಮಂತ್ರಿ ಸಿದ್ಧರಾಮಯ್ಯ ಭೇಟಿ ನೀಡಲಿದ್ದು, ವಿವಿಧ ಸರ್ಕಾರಿ ಇಲಾಖೆಗಳ ಕಾಮಗಾರಿಗಳ ಉದ್ಘಾಟನೆ ಹಾಗೂ ಗುದ್ದಲಿ ಪೂಜೆ ನೆರವೇರಿಸಲಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಭೀಮಣ್ಣ ನಾಯ್ಕ ತಿಳಿಸಿದರು‌

ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯ 6 ವಿಧಾನ ಸಭಾ ಕ್ಷೇತ್ರಗಳಿಗೂ ಸಿದ್ಧರಾಮಯ್ಯನವರು ಭೇಟಿ ನೀಡಲಿದ್ದಾರೆ. ಸುಮಾರು 2500 ಕೋಟಿ ಕಾಮಗಾರಿಗಳಿಗೆ ಚಾಲನೆ ನೀಡುವರು. ಕಾರವಾರ, ಕುಮಟಾ, ಭಟ್ಕಳ, ಶಿರಸಿ, ಮುಂಡಗೋಡ ಹಾಗೂ ಹಳಿಯಾಳದಲ್ಲಿ ಕಾರ್ಯಕ್ರಮ ನಡೆಯಲಿವೆ ಎಂದರು. ನಮ್ಮ ಕಾಂಗ್ರೆಸ್ ಪಕ್ಷ ನುಡಿದಂತೆ ನಡೆದುಕೊಂಡಿದೆ. ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಿಸಿದಂತಹ 160 ಭರವಸೆಗಳಲ್ಲಿ ಸುಮಾರು 155ಕ್ಕೂ ಅಧಿಕ ಭರವಸೆಗಳನ್ನು ಈಡೇರಿಸಲಾಗಿದೆ‌‌. ಅದೇ ರೀತಿ ಜಿಲ್ಲೆಗೂ ಸಾಕಷ್ಟು ಅನುದಾನ ಬಂದಿದೆ. ಮುಖ್ಯಮಂತ್ರಿಗಳು ಉದ್ಘಾಟನೆ ಮಾಡುತ್ತಿರುವ ಕಾಮಗಾರಿಗಳನ್ನು ನೋಡಿದಲ್ಲಿ ಜಿಲ್ಲೆಯ ಅಭಿವೃದ್ಧಿ ತಿಳಿಯುತ್ತದೆ‌. ಅಲ್ಲದೇ, ಸರ್ಕಾರಿ ಯೋಜನೆಗಳಿಂದ ಫಲವನ್ನು ಪಡೆದಿರುವ ಎಲ್ಲರೂ ಕಾರ್ಯಕ್ರದಲ್ಲಿ ಪಾಲ್ಗೊಳ್ಳಿದ್ದು, ಜಿಲ್ಲೆಯ 6 ಕ್ಷೇತ್ರಗಳಲ್ಲಿ ಜನರ ದೊಡ್ಡ ಸಮೂಹವೇ ಸೇರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

RELATED ARTICLES  ಡಯಾಲಿಸಿಸ್ ಯಂತ್ರಗಳ ಲೋಕಾರ್ಪಣೆ.

ರಮೇಶ ದುಭಾಶಿ, ಎಸ್.ಕೆ. ಭಾಗ್ವತ್, ಅಬ್ಬಾಸ್ ತೋನ್ಸೆ, ಖಾದರ್ ಆನವಟ್ಟಿ ಸುದ್ದಿಗೋಷ್ಠಿಯಲ್ಲಿದ್ದರು.