ಬೇಕಾಗುವ ಪದಾರ್ಥಗಳು.
ಇಡ್ಲಿ ಹಿಟ್ಟು – 2 ಬಟ್ಟಲು
ಕರಿಬೇವು- 5-6 ಎಳೆ
ಸಾಸಿವೆ – ಸ್ವಲ್ಪ
ಇಂಗು- ಚಿಟಿಕೆ
ಈರುಳ್ಳಿ-ಸಣ್ಣಗೆ ಹೆಚ್ಚಿದ್ದು
ಜೀರಿಗೆ- ಸ್ವಲ್ಪ
ಎಣ್ಣೆ – ಸ್ವಲ್ಪ
ಉಪ್ಪು – ರುಚಿಗೆ ತಕ್ಕಷ್ಟು
ಹಸಿಮೆಣಸಿನ ಕಾಯಿ – 4
ಕೊತ್ತಂಬರಿ ಸೊಪ್ಪು – ಸ್ವಲ್ಪ
ಮಾಡುವ ವಿಧಾನ…
ಮೊದಲು ಪ್ಯಾನ್ ಇಟ್ಟು ಅದಕ್ಕೆ ಸ್ವಲ್ಪ ಎಣ್ಣೆ ಹಾಕಿ ಬಿಸಿ ಮಾಡಬೇಕು. ನಂತರ ಸಾಸಿವೆ, ಜೀರಿಗೆ, ಇಂಗು, ಕರಿಬೇವಿನ ಸೊಪ್ಪು ಹಾಕಿ ಹುರಿದುಕೊಳ್ಳಬೇಕು.
ನಂತರ ಹಸಿಮೆಣಸಿನ ಕಾಯಿ ಮತ್ತು ಈರುಳ್ಳಿಯನ್ನು ಹಾಕಿ ಚಿನ್ನದ ಬಣ್ಣ ಬರುವವರೆಗೂ ಹುರಿದುಕೊಳ್ಳಬೇಕು.
ಹಿಟ್ಟು ತೆಗೆದುಕೊಂಡು ಅದಕ್ಕೆ ಈ ಒಗ್ಗರಣೆ, ಉಪ್ಪು ಹಾಕಿ ಚೆನ್ನಾಗಿ ಮಿಶ್ರಣ ಮಾಡಬೇಕು.
ಇಡ್ಲಿ ತಟ್ಟೆಗಳನ್ನು ತೆಗೆದುಕೊಂಡು ಅದಕ್ಕೆ ಸ್ವಲ್ಪ ಎಣ್ಣೆಯನ್ನು ಸವರಿ ಹಿಟ್ಟನ್ನು ಹಾಕಿ ಹಬೆಯಲ್ಲಿ ಬೇಯಿಸಬೇಕು. ನಂತರ ಕೊತ್ತಂಬರಿ ಸೊಪ್ಪಿನೊಂದಿಗೆ ಅಲಂಕರಿಸಿದರೆ, ರುಚಿಕರವಾದ ಮಸಾಲೆ ಇಡ್ಲಿ ಸವಿಯಲು ಸಿದ್ಧ.