ಬೆಂಗಳೂರು: ಸಹೋದ್ಯೋಗಿ ಸುನಿಲ್ ಹೆಗ್ಗರವಳ್ಳಿ ಹತ್ಯೆಗೆ ಸುಪಾರಿ ನೀಡಿದ ಆರೋಪ ಎದುರಿಸುತ್ತಿರುವ ಪತ್ರಕರ್ತ ರವಿ ಬೆಳಗೆರೆ ಅವರ ಪೊಲೀಸ್ ಕಸ್ಟಡಿ ಅವಧಿ ಇಂದಿಗೆ ಮುಕ್ತಾಯವಾಗುತ್ತಿರುವ ಹಿನ್ನೆಲೆಯಲ್ಲಿ ಅವರು ಜಾಮೀನು ಅರ್ಜಿ ಸಲ್ಲಿಸಲಿದ್ದಾರೆ.
ಆದರೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ರವಿ ಬೆಳಗೆರೆಯಿಂದ ಹೆಚ್ಚಿನ ಮಾಹಿತಿ ಪೊಲೀಸರಿಗೆ ಸಿಗದಿರುವುದರಿಂದ ಇನ್ನು ಕೆಲ ದಿನಗಳವರೆಗೆ ಪೊಲೀಸ್ ಕಸ್ಟಡಿ ಮುಂದುವರಿಯಲಿದೆ ಎಂದು ಹೇಳಲಾಗುತ್ತಿದೆ.ಸಿಸಿಬಿ ಅಕ್ರಮ ಶಸ್ತ್ರಾಸ್ತ್ರ, ಕೊಲೆ ಸಂಚು ಸೇರಿ ಇನ್ನಿತರ ಜಾಮೀನು ರಹಿತ ಸೆಕ್ಷನ್ ಹಾಕಿದ್ದಾರೆ.
ರವಿ ಬೆಳಗೆರೆ ಅವರನ್ನು ಇಂದು ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುತ್ತದೆ. ಅವರು ಬಿ.ಪಿ, ಸಕ್ಕರೆ ಕಾಯಿಲೆಯಿಂದ ಬಳಲುತ್ತಿರುವುದರಿಂದ ಅನಾರೋಗ್ಯದ ಕಾರಣ ನೀಡಿ ಅವರ ಪರ ವಕೀಲರು ಜಾಮೀನಿಗೆ ಅರ್ಜಿ ಸಲ್ಲಿಸಬಹುದು.
ಬಂಧನಕ್ಕೆ ಸಂಬಂಧಪಟ್ಟ ಕೆಲ ದಾಖಲೆಗಳು ನಮ್ಮ ಕೈಸೇರಿಲ್ಲ. ಇಂದು ಸಂಜೆ ವೇಳೆಗೆ ದಾಖಲೆಗಳು ಕೈ ಸೇರಿದರೆ ಜಾಮೀನಿಗೆ ಅರ್ಜಿಸಲ್ಲಿಸಲಾಗುವುದು” ಎಂದು ರವಿ ಬೆಳಗೆರೆ ಪರ ವಕೀಲ ದಿವಾಕರ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.