ಬೆಳಗಾವಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಇರುವುದು ರಾಕ್ಷಸ ಮುಖ ಎಂದು ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಟೀಕಿಸಿದ್ದಾರೆ.

‘ಕಾಂಗ್ರೆಸಿಗರು ಮೊದಲು ಅವರ ಮುಖ ಕನ್ನಡಿಯಲ್ಲಿ ನೋಡಿಕೊಳ್ಳಬೇಕು. ಸಿಎಂ ಸಿದ್ದರಾಮಯ್ಯ, ಕಾಂಗ್ರೆಸಿಗರ ಮುಖ ರಾಕ್ಷಸ ಮುಖವೋ, ಮನುಷ್ಯರ ಮುಖವೋ ಗೊತ್ತಾಗುತ್ತೆ’ ಎಂದರು.

ಪರೇಶ್ ಮೆಸ್ತಾನನ್ನು ಚಿತ್ರಹಿಂಸೆ ಕೊಟ್ಟು ಕೊಂದಿದ್ದಾರೆ. ಪರೇಶ್ ಸಾವು ಮಾನವೀಯತೆಯ ಕಗ್ಗೊಲೆಯಾಗಿದೆ. ಉತ್ತರ ಕನ್ನಡದ ಜನ ಶಾಂತಿಪ್ರಿಯರು, ಪ್ರಕರಣವನ್ನು ವ್ಯವಸ್ಥಿತವಾಗಿ ಮುಚ್ಚಿ ಹಾಕಲಾಗುತ್ತಿದೆ ಎಂದು ದೂರಿದರು.

RELATED ARTICLES  ರಸಪ್ರಶ್ನೆಯಲ್ಲಿ ಚಿತ್ರಿಗಿ ಪ್ರೌಢಶಾಲೆಯ ಪ್ರಣೀತ್, ವಿಶ್ವಾಸ್ ಜೋಡಿ ದ್ವಿತೀಯ

ನ್ಯಾಯಯುತ ತನಿಖೆ ಮಾಡುವ ಮನಸ್ಸು ಕಾಂಗ್ರೆಸ್ ಸರ್ಕಾರಕ್ಕೆ ಇಲ್ಲ. ಅಲ್ಪಸಂಖ್ಯಾರ ಮತಗಳ ತುಷ್ಟೀಕರಣ ಮಾಡಲಾಗುತ್ತಿದೆ. ಅಲ್ಲಿನ ಜಿಲ್ಲಾಡಳಿತ ಸಂಪೂರ್ಣ ವಿಫಲವಾಗಿದೆ. ಸಿಪಿಐ, ಪಿಎಸ್ಐ ಸಮಾಜಘಾತುಕ ಶಕ್ತಿಗಳೊಂದಿಗೆ ಶಾಮೀಲಾಗಿದ್ದಾರೆ ಎಂದು ಆರೋಪಿಸಿದರು.

RELATED ARTICLES  ಜನರ ಕಷ್ಟಕ್ಕೆ ಸ್ಪಂದಿಸುವ ಹಂಬಲದಿಂದ ಪಂಚರತ್ನ ಯೋಜನೆ ಜಾರಿಮಾಡುವೆ : ಎಚ್.ಡಿ ಕುಮಾರಸ್ವಾಮಿ

ರಾಜ್ಯ ಸರ್ಕಾರದಿಂದ ನಮಗೆ ನ್ಯಾಯ ಸಿಗುವ ಭರವಸೆ ಇಲ್ಲ. ರಾಜ್ಯದಲ್ಲಿ ಪರೇಶ ಸೇರಿ 20 ಜನರ ಕಗ್ಗೊಲೆ ಆಗಿದೆ. ಕೇಂದ್ರ ಸರ್ಕಾರ ಮಧ್ಯಪ್ರವೇಶಿಸಿ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.