ಬೆಂಗಳೂರು: ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರ ಆರೋಪ, ಪ್ರತ್ಯಾರೋಪಕ್ಕೆ ಕಾರಣವಾಗಿರುವ ಹಿಂದೂ ಸಂಘಟನೆಯ ಕಾರ್ಯಕರ್ತ ಪರೇಶ್ ಮೇಸ್ತಾ ಸಾವಿನ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ ಎಂದು ಗೃಹ ಸಚಿವ ರಾಮಲಿಂಗಾ ರೆಡ್ಡಿ ಅವರು ಹೇಳಿದ್ದಾರೆ.

ಇಂದು ಪರಪ್ಪನ ಅಗ್ರಹಾರ ಜೈಲಿನ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ರಾಮಲಿಂಗಾ ರೆಡ್ಡಿ ಅವರು, ಮೇಸ್ತಾ ಸಾವಿನ ಪ್ರಕರಣವನ್ನು ಸಿಬಿಐಗೆ ವಹಿಸಲು ಸರ್ಕಾರ ನಿರ್ಧರಿಸಿದೆ ಎಂದಿದ್ದಾರೆ.

ಪರೇಶ್ ಮೇಸ್ತಾ ಮರಣೋತ್ತರ ಪರೀಕ್ಷಾ ವರದಿ ಬರಲು ಇನ್ನು 8ರಿಂದ 10 ದಿನ ಬೇಕು. ವರದಿ ಬಂದ ನಂತರ ಸಾವಿಗೆ ನಿಖರ ಕಾರಣ ಏನು ಎಂಬುದು ತಿಳಿಯುತ್ತದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಪಕ್ಷ ಬಿಜೆಪಿ ವಿಧಾನಸಭೆ ಚುನಾವಣೆಯನ್ನು ಮುಂದಿಟ್ಟುಕೊಂಡು ಅನಗತ್ಯ ಆರೋಪಗಳನ್ನು ಮಾಡುತ್ತಿದೆ. ಐಎಎಸ್ ಅಧಿಕಾರಿ ಡಿ.ಕೆ.ರವಿ ಅವರ ಪ್ರಕರಣದಲ್ಲೂ ಬಿಜೆಪಿ ಹೀಗೆ ಮಾಡಿತ್ತು. ಕೊನೆಗೆ ಸಿಬಿಐ ಸಹ ಕ್ಲೀನ್ ಚಿಟ್ ನೀಡಿದೆ ಎಂದು ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದರು.

RELATED ARTICLES  ಶ್ರೀಗಳನ್ನು ಭೇಟಿ ಮಾಡಿ ಆಶೀರ್ವಾದ ಪಡೆದ ದಿನಕರ ಶೆಟ್ಟಿ.

ಪರಮೇಶ್ ಮೇಸ್ತಾ ಪ್ರಕರಣಕ್ಕೆ ಸಂಬಂಧಿಸಿದಂತೆ ನಾನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಿದ್ದು, ಪ್ರಕರಣವನ್ನು ಸಿಬಿಐಗೆ ವಹಿಸಲು ತೀರ್ಮಾನಿಸಿರುವುದಾಗಿ ರಾಮಲಿಂಗಾ ರೆಡ್ಡಿ ಅವರು ತಿಳಿಸಿದ್ದಾರೆ.

RELATED ARTICLES  ಬೆಳಕು ಎಲ್ಲಿಂದಲೇ ಬರಲಿ ಬೆಳಕಿಗೆ ತಾರತಮ್ಯವಿಲ್ಲ-ಉಮೇಶ ಮುಂಡಳ್ಳಿ

ಬಿಜೆಪಿ ನಾಯಕರ ಒತ್ತಾಯಕ್ಕೆ ಮಣಿದು ನಾವು ಪ್ರಕರಣವನ್ನು ಸಿಬಿಐಗೆ ವಹಿಸುತ್ತಿಲ್ಲ. ಮೇಸ್ತಾ ಅವರ ಕುಟುಂಬದ ಒತ್ತಾಸೆಯಂತೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲಾಗುವುದು ಎಂದು ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.

ಹೊನ್ನಾವರದಲ್ಲಿ ನಡೆದ ಪರೇಶ್ ಮೇಸ್ತಾ ಅನುಮಾನಾಸ್ಪದ ಸಾವು ಖಂಡಿಸಿ ಬಿಜೆಪಿ ಕಾರ್ಯಕರ್ತರು ಶಿರಸಿ ಹಾಗೂ ಕುಮಟಾದಲ್ಲಿ ಹಿಂಸಾತ್ಮಕ ಪ್ರತಿಭಟನೆ ನಡೆಸಿದ್ದರು.