ನವದೆಹಲಿ: ಬ್ಯಾಂಕ್ ಖಾತೆಗಳಿಗೆ ಆಧಾರ್ ಮತ್ತು ಪ್ಯಾನ್ ಕಾರ್ಡ್ ಲಿಂಕ್ ಮಾಡಲು ಹಾಗೂ ಮೊಬೈಲ್ ಸಂಖ್ಯೆಗೆ ಆಧಾರ ಲಿಂಕ್ ಮಾಡಲು ಕೇಂದ್ರ ಸರ್ಕಾರ ಡಿಸೆಂಬರ್ 31ರವರೆಗೆ ಕಾಲಾವಕಾಶ ನೀಡಿತ್ತು. ಈಗ ಅದನ್ನು ಮಾರ್ಚ್ 31, 2018ರ ವರೆಗೆ ವಿಸ್ತರಿಸಿದೆ.

ಈ ಸಂಬಂಧ ಕೇಂದ್ರ ಸರ್ಕಾರ ಇಂದು ಅಧಿಸೂಚನೆ ಹೊರಡಿಸಿದ್ದು, ಆಧಾರ್‌ ಮತ್ತು ಪ್ಯಾನ್‌ ಸಂಖ್ಯೆಯನ್ನು ಬ್ಯಾಂಕ್‌ ಖಾತೆಗೆ ಜೋಡಣೆ ಮಾಡಿಕೊಳ್ಳುವ ಗಡುವನ್ನು ಮಾರ್ಚ್ 31ರ ವರೆಗೆ ವಿಸ್ತರಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

RELATED ARTICLES  ಏ 10 ರಿಂದ 14 ವರೆಗೆ ರಾಮೋತ್ಸವ - ರಾಜ್ಯಮಟ್ಟದ ಕೃಷಿ ಉತ್ಸವ - ವಾರ್ಷಿಕ ಪ್ರಶಸ್ತಿ ಪ್ರದಾನ

ಸರ್ಕಾರದ ವಿವಿಧ ಯೋಜನಗಳ ಲಾಭ ಪಡೆಯಲು ಹಾಗೂ ಮೊಬೈಲ್ ಸಂಖ್ಯೆಗೆ ಆಧಾರ್ ಜೋಡಣೆ ಮಾಡಲು ನಿಗದಿಪಡಿಸಿರುವ ಡಿಸೆಂಬರ್ 31ರ ಗಡುವನ್ನು ಮಾರ್ಚ್ 31ರ ವರೆಗೆ ವಿಸ್ತರಣೆ ಮಾಡಲು ಸಿದ್ಧ ಎಂದು ಕೇಂದ್ರ ಸರ್ಕಾರ ಕಳೆದ ವಾರ ಸುಪ್ರೀಂ ಕೋರ್ಟ್ ಗೆ ತಿಳಿಸಿತ್ತು. ಅದರಂತೆ ಈಗ ವಿಸ್ತರಣೆ ಮಾಡಿದೆ.

ಅಕ್ರಮ ಹಣ ವಹಿವಾಟು ತಡೆ ಕಾಯ್ದೆ ಪ್ರಕಾರ ಪ್ಯಾನ್ ನಂಬರ್ ಹಾಗೂ ಆಧಾರ್ ಸಂಖ್ಯೆಯನ್ನು ಸರ್ಕಾರದ ಸೇವೆಯೊಂದಿಗೆ ಲಿಂಕ್ ಮಾಡುವುದು ಕಡ್ಡಾಯ ಮಾಡಲಾಗಿದ್ದು, ಹೊಸ ಬ್ಯಾಂಕ್ ಖಾತೆ ತೆರೆಯಲು ಹಾಗೂ ಚಾಲ್ತಿಯಲ್ಲಿರುವ ಖಾತೆಗಳಿಗೆ ಆಧಾರ್ ಲಿಂಕ್ ಮಾಡುವುದನ್ನು ಕಡ್ಡಾಯಗೊಳಿಸಲಾಗಿತ್ತು.

RELATED ARTICLES  ಯಾವ ಪಕ್ಷದ ಪರವಾಗಿಯೂ ನಿಲ್ಲದೇ ಮೌನ ತಾಳಿವೆ ಚಿತ್ರದುರ್ಗದ ಪ್ರಭಾವೀ ಮಠಗಳು!

ವಿಶೇಷ ಗುರುತಿನ ಚೀಟಿ ಪ್ರಾಧಿಕಾರ ಸಾರ್ವಜನಿಕರಿಗೆ ಆಧಾರ್ ಸಂಖ್ಯೆಯನ್ನು ವಿತರಿಸುತ್ತಿದೆ. ಆದಾಯ ತೆರಿಗೆ ಇಲಾಖೆ ಮೂಲಕ ಭಾರತದ ನಾಗರಿಕರು ಪ್ಯಾನ್ ಕಾರ್ಡ್ ಪಡೆದುಕೊಳ್ಳಬಹುದಾಗಿದೆ. ಆಧಾರ್ ಅನ್ನು ಎಲ್ಲಾ ಸೇವೆಗಳಿಗೆ ಕಡ್ಡಾಯ ಮಾಡಿರುವ ಸರ್ಕಾರದ ಕ್ರಮ ಸೂಕ್ತವಲ್ಲ ಅಂತಾ ಸುಪ್ರೀಂ ಕೋರ್ಟ್ ಗೂ ಅರ್ಜಿ ಸಲ್ಲಿಸಲಾಗಿದೆ.