ತುಮಕೂರು: ಶೈಕ್ಷಣಿಕ ಪ್ರವಾಸಕ್ಕೆ ತೆರಳಿದ್ದ ವೇಳೆ ವಿದ್ಯಾರ್ಥಿಗಳಿಗೆ ಮದ್ಯ ಕುಡಿಸಿದ ಆರೋಪದ ಮೇಲೆ ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಬೊಮ್ಮಲದೇವಿಪುರದ ಸರ್ಕಾರಿ ಪ್ರೌಢ ಶಾಲೆಯ ಮೂವರು ಶಿಕ್ಷಕರನ್ನು ಬುಧವಾರ ಸೇವೆಯಿಂದ ಅಮಾನತುಗೊಳಿಸಲಾಗಿದೆ.

ವಿದ್ಯಾರ್ಥಿಗಳಿಂದ ಮಾಹಿತಿ ಪಡೆದುಕೊಂಡ ಡಿಡಿಪಿಐ ರವಿಶಂಕರ ರೆಡ್ಡಿಯವರು ಮೂವರು ಶಿಕ್ಷಕರನ್ನು ಅಮಾನತ್ತುಗೊಳಿಸಿ ಆದೇಶ ಹೊರಡಿಸಿದ್ದಾರೆ.
ಶಾಲೆಯ ಮುಖ್ಯ ಶಿಕ್ಷಕ ಸಚ್ಚಿದಾನಂದ ಹಾಗೂ ಶಿಕ್ಷಕರಾದ ಶೇಖ್ ಮುಜಾಮಿಲ್ ಹಾಗೂ ಧನ್‌ಸಿಂಗ್‌ ರಾಥೋಡ್ ಎಂಬವವರು ಪ್ರವಾಸದುದ್ದಕ್ಕೂ ಪಾನಮತ್ತರಾಗಿಯೇ ಇದ್ದರು. ಅಷ್ಟೇ ಅಲ್ಲ, ಬಾಯಾರಿದ್ದ ಮಕ್ಕಳು ಕುಡಿಯಲು ನೀರು ಕೇಳಿದಾಗ ನೀರಿನ ಬಾಟಲಿಯಲ್ಲಿ ಮದ್ಯ ಮಿಕ್ಸ್ ಮಾಡಿ ಕುಡಿಸಿ ನಾಚಿಕೆಗೇಡಿನ ವರ್ತನೆ ತೋರಿದ್ದಾರೆ ಎಂದು ಆರೋಪಿಸಲಾಗಿದೆ.

RELATED ARTICLES  ಯಡಿಯೂರಪ್ಪ ಮೇಲೆ ಆರೋಪ ಮಾಡಿದರೆ ಅದು ನಿಮಗೆ ತಿರುಗಿಬೀಳಬಹುದು: ಸೋನಿಯಾ, ರಾಹಲ್ ಗೆ ಪ್ರಧಾನಿ ಮೋದಿ ಎಚ್ಚರಿಕೆ.

ಹಾಸನದ ಬೇಲೂರು ಬಳಿ ಟೀ ಕುಡಿಯಲು ಬಸ್ ನಿಲ್ಲಿಸಿದ್ದ ವೇಳೆ ಶಿಕ್ಷಕರು ಈ ಕೃತ್ಯವನ್ನೆಸಗಿದ್ದಾರೆ ಎಂದು ತಿಳಿದು ಬಂದಿದ್ದು, ಮದ್ಯ ಸೇವಿಸಿದ ಬಳಿಕ 20ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥರಾಗಿದ್ದಾರೆ. ಕೆಲವರು ಪ್ರಜ್ಞೆ ಕಳೆದುಕೊಂಡರೆ ಮತ್ತೆ ಕೆಲವರು ವಾಂತಿ ಮಾಡಿಕೊಂಡಿದ್ದಾರೆ.
ಶಿಕ್ಷಕರ ಈ ಕೃತ್ಯಕ್ಕೆ ವಿದ್ಯಾರ್ಥಿಗಳ ಪೋಷಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಮೂವರನ್ನು ಅಮಾನತು ಮಾಡಬೇಕು ಎಂದು ಒತ್ತಾಯಿಸಿದ್ದರು. ಬಳಿಕ ವಿದ್ಯಾರ್ಥಿಗಳಿಂದ ಮಾಹಿತಿ ಪಡೆದುಕೊಂಡ ಡಿಡಿಪಿಐ ರವಿಶಂಕರ ರೆಡ್ಡಿಯವರು ಮೂವರು ಶಿಕ್ಷಕರನ್ನು ಅಮಾನತ್ತುಗೊಳಿಸಿ ಆದೇಶ ಹೊರಡಿಸಿದ್ದಾರೆ.

RELATED ARTICLES  ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿ ನಾವೂ ಹಿಂದೂಗಳೇ ಎಂಬುದನ್ನು ತೋರಿಸುತ್ತೇವೆ; ಹೆಚ್'ಡಿಕೆ