ಉತ್ತರಕನ್ನಡ : ಸಂಸದ ಅನಂತಕುಮಾರ್ ಹೆಗಡೆ ತಮ್ಮ ಫೋಸ್ ಬುಕ್ ಖಾತೆಯಲ್ಲಿ ಬರೆದಿರುವ ಬರಹ ಈಗ ಚರ್ಚೆಗೆ ಗ್ರಾಸವಾಗಿದೆ. ಅವರು ಬರೆದಿದ್ದೇನು ಎಂಬ ಪೂರ್ಣ ಬರಹ ಇಲ್ಲಿದೆ ನೋಡಿ.

ಸಾಕ ಬೇಕಾ ತಪರಾಕಿ ಸಿದ್ಧರಾಮಯ್ಯನವರೇ!! ನಿಂಬಾಳ್ಕರ್, ರಾಮಲಿಂಗ ರೆಡ್ಡಿ ಹಾಗು ಕೆಂಪಯ್ಯನಂಥ ಜನರಿದ್ದರೆ ಮುಂದಿದೆ ನೋಡಿ ಇನ್ನು ಶಿರಸಿಯ ದೊಡ್ಡ ಮಾರಿಕಾಂಬ ಹಬ್ಬ!

ಶಿರಸಿಯಲ್ಲಿ ಮೊನ್ನೆಯ ದಿನ police ಪ್ರೇರಿತ ಗಲಭೆಯಲ್ಲಿ ಬಂಧಿತರಾಗಿದ್ದ ೬೨ ಮಂದಿ ಮುಗ್ದರನ್ನು ಶಿರಸಿ ನ್ಯಾಯಾಲಯ ಇಂದು ಜಾಮೀನು ಪಡೆದು ಬಿಡುಗಡೆಗೆ ಆದೇಶಿಸಿದೆ. ಕೇವಲ ಒಂದೂವರೆ ದಿನದಲ್ಲಿ ಬಿಡುಗಡೆಯ ಆದೇಶ ಪಡೆದ ಕ್ರಮವು ಐತಿಹಾಸಿಕವಾಗಿದ್ದು, ಈ ತೀರ್ಪು police ಸಮವಸ್ತ್ರದಲ್ಲಿ ದಾದಾಗಿರಿ ಮಾಡಲು ಹೊರಟಿದ್ದ ನಿಂಬಾಳ್ಕರ್ ಎಂಬ ಹುಂಬ ಅಧಿಕಾರಿಗೆ ತೀವ್ರವಾದ ಕಪಾಳ ಮೋಕ್ಷವಾಗಿದೆ. Section ೩೦೭ ಅನ್ನು ಮನಬಂದಂತೆ ಜರುಗಿಸಿ ವಿಕೃತ ಪಭುತ್ವ ಸಾಧಿಸಲು ಹೊರಟರೆ, ಈ ದೇಶದ ಕಾನೂನು ಸುಮ್ಮನೆ ಕೂರುವುದಿಲ್ಲ ಎಂದು ಇಂದಿನ ನ್ಯಾಯಾಲಯದ ತೀರ್ಮಾನ ಸ್ಪಷ್ಟವಾಗಿ ತಿಳಿಸಿದೆ. ಇದು ಪ್ರಜಾಪ್ರಭುತ್ವದ ವಿಜಯ!

RELATED ARTICLES  ಗೋಕರ್ಣ ಗೌರವ ಕಾರ್ಯಕ್ರಮದಲ್ಲಿ ಭಾಗವಹಿಸಿದ ಪಂಚಗ್ರಹ ಹಿರೇಮಠ ಸ್ವಾಮಿಗಳು

ಸನ್ಮಾನ್ಯ ಸಿದ್ಧರಾಮಯ್ಯನವರೇ ನಿಮ್ಮ ಮುಖವನ್ನು ಮತ್ತೊಮ್ಮೆ ಕನ್ನಡಿ ಮುಂದೆ ನೋಡಿಕೊಳ್ಳಿ! ನಿಮ್ಮ ಒಡ್ಡೋಲಗದ ಸಹೋದ್ಯೋಗಿಗಳು ಸಹ ನಿಮ್ಮನ್ನು ನಡು ನೀರಿನಲ್ಲಿ ಕೈ ಬಿಟ್ಟು ಹೋಗುವ ದಿನ ದೂರವಿಲ್ಲ. ವಿದ್ರೋಹಿಗಳ ಬೆಂಬಲಕ್ಕೆ ನಿಂತು ದೇಶ ಭಕ್ತರನ್ನು ಸದೆಬಡಿಯುವ ನಿಮ್ಮ ಯೋಜನೆಗೆ, ನಿಮ್ಮ ಅಮೂಲ್ಯ ಸಲಹೆಗಾರನಾಗಲಿ ಅಥವಾ ನಾಲಾಯಕ್ ಗೃಹ ಮಂತ್ರಿಯಾಗಲಿ ಇನ್ನೇನು ತಾನೇ ಕಿಸಿಯಲು ಸಾಧ್ಯ?

RELATED ARTICLES  ಫೆ. 3 ರಂದು ಶ್ರೀ ಕರಿಕಾನಮ್ಮನ ಗುಡ್ಡದಲ್ಲಿ ನಡೆಯಲಿದೆ 20ನೇ ವರ್ಷದ ಬೆಳದಿಂಗಳ ಸಂಗೀತೋತ್ಸವ.

ನಮ್ಮ ಹೋರಾಟಕ್ಕೆ ಇಂದಿನ ಈ ತೀರ್ಪು ಬಹು ದೊಡ್ಡ ನೈತಿಕ ಬೆಂಬಲ ನೀಡಿ ಹೋರಾಟದ ಕಿಚ್ಚನ್ನು ಇನ್ನಷ್ಟು ಹೆಚ್ಚಿಸಿದೆ. ಬರುವ ದಿನಗಳಲ್ಲಿ ಹೋರಾಟ ತೀವ್ರಗೊಳ್ಳಲಿದ್ದು ಕೋಮುವಾದಿ, ಜಾತಿವಾದಿ ಹುಂಬ ಸರ್ಕಾರವಲ್ಲದೆ, ದೇಶದೊಳಗೆ ಇರುವ ವಿದ್ರೋಹಿಗಳಿಗೆ ಸಹ ನಮ್ಮ ಸಂಘಟಿತ ರುಚಿ ತೋರಿಸಲಿದ್ದೇವೆ. ಹುಂಬ ಧೈರ್ಯವಿದ್ದರೆ ಎದುರಿಸಲಿ!

ನ್ಯಾಯಾಲಯದಲ್ಲಿ ನಮ್ಮ ದೇಶ ಭಕ್ತರ ಪರವಾಗಿ ವಾದಿಸಿ ನ್ಯಾಯ ದೊರೆಕಿಸಿಕೊಟ್ಟ ಅಷ್ಟು ವಕೀಲ-ವೃಂದದವರಿಗೆ ನನ್ನ ಬಹುದೊಡ್ಡ ಧನ್ಯವಾದಗಳು. ದೇಶ ಕಟ್ಟುವ ಕೆಲಸದಲ್ಲಿ ಜೊತೆಯಾದ ಎಲ್ಲರಿಗೂ ನನ್ನ ಅನಂತ ವಂದನೆಗಳು.

ಹೀಗೆಂದು ಅನಂತ ಕುಮಾರ್ ಹೆಗಡೆ ತಮ್ಮ ಫೇಸ್ ಬುಕ್ ನಲ್ಲಿ ಬರೆದುಕೊಂಡಿದ್ದು ಜನರ ಗಮನ ಸೆಳೆದಿದೆ.