ಗೋಕರ್ಣ: ಪ.ಪೂ. ಶ್ರೀ ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿ ನಂದಿ ಬಸವೇಶ್ವರ ಮಠ ಐನಾಪುರ ತಾ-ಚಿಂಚೊಳ್ಳಿ ಜಿಲ್ಲೆ- ಕಲ್ಬುರ್ಗಿ ಇವರು ಶ್ರೀ ಕ್ಷೇತ್ರ ಗೋಕರ್ಣದ ಶ್ರೀ ಮಹಾಬಲೇಶ್ವರ ದೇವಾಲಯದಲ್ಲಿ ಜರುಗುತ್ತಿರುವ “ಗೋಕರ್ಣ ಗೌರವ” ಕಾರ್ಯಕ್ರಮದಲ್ಲಿ ಭಾಗವಹಿಸಿ ಶ್ರೀ ಆತ್ಮಲಿಂಗ ಪೂಜೆ ನೆರವೇರಿಸಿದರು .

RELATED ARTICLES  ಬೆಳೆ ಸಮೀಕ್ಷೆ ಅರ್ಧಕ್ಕಿಂತ ಹೆಚ್ಚು ಮುಗಿದಿದೆ. ಇಲಾಖೆಯಿಂದ ಮಾಹಿತಿ

ಶ್ರೀ ದೇವಾಲಯದ ಉಪಾಧಿವಂತರಾದ ವೇ. ವಿಶ್ವನಾಥ ಭಟ್ ಇವರು ಪೂಜ್ಯರಿಗೆ ಫಲ ಸಮರ್ಪಿಸಿ , ಶಾಲು ಹೊದೆಸಿ, ತಾಮ್ರಪತ್ರ ಸ್ಮರಣಿಕೆ ನೀಡಿ, ಗೌರವ ಸಲ್ಲಿಸಿದರು . ಆಡಳಿತಾಧಿಕಾರಿ ಶ್ರೀ ಜಿ ಕೆ ಹೆಗಡೆ ಮತ್ತು ಉಪಾಧಿವಂತ ಮಂಡಳಿ ಸದಸ್ಯರು ಉಪಸ್ಥಿತರಿದ್ದರು. ವೇ. ವಿಶ್ವನಾಥ್ ಭಟ್ ಬಾಳೆಹಿತ್ಲುಇವರು ಪೂಜಾ ಕೈಂಕರ್ಯ ನೆರವೇರಿಸಿದರು

RELATED ARTICLES  ಹಿರಿಯ ಯಕ್ಷಗಾನ ಕಲಾವಿದ ಸುಬ್ರಹ್ಮಣ್ಯ ಚಿಟ್ಟಾಣಿಯವರಿಗೆ ಪ್ರಾಣಾಪಾಯವಿಲ್ಲ