ಕಲಬುರ್ಗಿ : ಯೋಗೀಶ್ ಗೌಡ ಪತ್ನಿ ಮಲ್ಲಮ್ಮ ಕಾಂಗ್ರೆಸ್ ಪಕ್ಷ ಸೇರುವ ವಿಚಾರಕ್ಕೆ ನಗರದಲ್ಲಿ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ, ಕಾಂಗ್ರೆಸ್ ಪಕ್ಷಕ್ಕೆ ಸೇರುತ್ತಾರೆ ಎಂದು ನಾವು ಹೇಳಿಲ್ಲ, ಕಾಂಗ್ರೆಸ್ ಪಕ್ಷ ಸೇರುವುದಾಗಿ ಅವರೇ ಹೇಳಿಕೆ ನೀಡಿದ್ದಾರೆ. ಈ ಹಿಂದೆ ಬಿಜೆಪಿಯವರು ಕಿರುಕುಳ ನೀಡಿದ್ದರಿಂದಾಗಿ ಸುಳ್ಳು ಹೇಳಿಕೆ ನೀಡಿದ್ದರು. ಈಗ ಅವರಿಗೆ ಯಾರು ಏನೆಂದು ಮನವರಿಕೆಯಾಗಿದ್ದು ಕಾಂಗ್ರೆಸ್ ಪಕ್ಷಕ್ಕೆ ಸೇರುವುದಾಗಿ ತಿಳಿಸಿದ್ದಾರೆ ಎಂದರು.

RELATED ARTICLES  ಗಂಡನ ಮನೆಯವರು ಮಾನಸಿಕ ಮತ್ತು ದೈಹಿಕ ಕಿರುಕುಳ ನೀಡುತ್ತಿದ್ದರಿಂದ ನೊಂದ ಮಹಿಳೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣು.

ಇದೇ ವೇಳೆ ಬಿಎಸ್.ಯಡಿಯೂರಪ್ಪ ಅವರ ತೀಕ್ಷಣ ಮಾತಿಗೆ ಪ್ರತಿಕ್ರಿಸಿರುವ ಸಿಎಂ, ಅವರಿಗೆ ನಾಲಾಯಕ್, ಅಯೋಗ್ಯ ಪದಗಳು ಬಿಟ್ಟರೆ ಬೇರೆ ಗೊತ್ತಿಲ್ಲ. ಹೀಗಾಗಿಯೇ ಹೋದಲ್ಲೆಲ್ಲ ಅದೇ ಪದಗಳನ್ನು ಬಳಸುತ್ತಿದ್ದಾರೆ. ಬೊಗಳೆ ದಾಸಯ್ಯ ಎಂಬಂತಹ ಮಾತುಗಳನ್ನಾಡಿದ್ದಾರೆ

RELATED ARTICLES  ಕೈಗೆಟುಕುವ ದರದಲ್ಲಿ ಸಾರಿಗೆ ವ್ಯವಸ್ಥೆಗಳನ್ನು ಕಲ್ಪಿಸುವುದು ಕೇಂದ್ರ ಸರ್ಕಾರದ ಆದ್ಯತೆ ; ಪ್ರಧಾನಿ ನರೇಂದ್ರ ಮೋದಿ.

ನಾವು ಬೊಗಳೆ ದಾಸರಲ್ಲ ಯಾರು ಬೊಗಳೆ ದಾಸರು ಎಂಬುದನ್ನು ತಿಳಿದುಕೊಳ್ಳಲು ಬಹಿರಂಗ ಚರ್ಚೆಗೆ ಬರಲಿ ನಾವು ಬಹಿರಂಗ ಚರ್ಚೆಗೆ ಸಿದ್ಧ ಎಂದು ಸವಾಲು ಹಾಕಿದ್ದಾರೆ.