ನವದೆಹಲಿ: ಗುಜರಾತ್ ಹಾಗೂ ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆಯ ಮತ ಎಣಿಕೆ ಕಾರ್ಯ ಬಹುತೇಕ ಮುಕ್ತಾಯ ಹಂತ ತಲುಪಿದ್ದು, ಎರಡೂ ರಾಜ್ಯಗಳಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬರುವುದು ನಿಚ್ಚಳವಾಗಿದೆ.

182 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ಗುಜರಾತ್ ನಲ್ಲಿ ಬಿಜೆಪಿ ಈಗಾಗಲೇ 81 ಸ್ಥಾನಗಳಲ್ಲಿ ಗೆದ್ದಿದ್ದು 20 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ, ಕಾಂಗ್ರೆಸ್ ಪಕ್ಷ 55 ಕ್ಷೇತ್ರಗಳಲ್ಲಿ ಗೆದ್ದಿದ್ದು 23 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಇತರರು 2 ಕ್ಷೇತ್ರಗಳಲ್ಲಿ ಗೆದ್ದಿದ್ದು ಒಂದು ಕ್ಷೇತ್ರದಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ. ಸರ್ಕಾರ ರಚಿಸಲು ಅಗತ್ಯವಿರುವ 92 ಸ್ಥಾನಗಳ ಸರಳ ಬಹುಮತದತ್ತ ಬಿಜೆಪಿ ಸಾಗುತ್ತಿದ್ದು, ಸತತ 6 ನೇ ಬಾರಿಗೆ ಗುಜರಾತ್ ನಲ್ಲಿ ಬಿಜೆಪಿ ಅಧಿಕಾರವನ್ನು ದಕ್ಕಿಸಿಕೊಂಡಿದೆ.

RELATED ARTICLES  ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ರೂ.2 ಲಕ್ಷ ದೇಣಿಗೆಯನ್ನು ನೀಡಿದ ಭಟ್ಕಳ ಅರ್ಬನ್ ಕೋ-ಆಪರೇಟಿವ್ ಬ್ಯಾಂಕ್

ಇನ್ನು ಹಿಮಾಚಲ ಪ್ರದೇಶದಲ್ಲಿಯೂ ಬಿಜೆಪಿ ಬಹುಮತ ಗಳಿಸುವುದು ಸ್ಪಷ್ಟವಾಗಿದ್ದು, ಒಟ್ಟಾರೆ 68 ಕ್ಷೇತ್ರಗಳಲ್ಲಿ ಬಿಜೆಪಿ 18 ಕ್ಷೇತ್ರಗಳಲ್ಲಿ ಗೆದ್ದಿದ್ದು 26 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಕಾಂಗ್ರೆಸ್ 6 ಕ್ಷೇತ್ರಗಳಲ್ಲಿ ಗೆದ್ದಿದ್ದು 14 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.

RELATED ARTICLES  ರಾಜ್ಯದಲ್ಲೂ ಬೀಸುತ್ತಿದೆಯೇ ಈಶಾನ್ಯ ಮಾರುತ?