ಬೆಂಗಳೂರು: ತಮ್ಮ ಸಹೋದ್ಯೋಗಿ ಪತ್ರಕರ್ತನ ಹತ್ಯೆಗೆ ಸುಪಾರಿ ನೀಡಿದ ಆರೋಪ ಎದುರಿಸುತ್ತಿರುವ ಹಿರಿಯ ಪತ್ರಕರ್ತ ಹಾಗೂ ಹಾಯ್ ಬೆಂಗಳೂರು ಸಂಪಾದಕ ರವಿ ಬೆಳಗೆರೆ ಅವರ ಮಧ್ಯಂತರ ಜಾಮೀನು ಅವಧಿಯನ್ನು ಡಿಸೆಂಬರ್ 21ರವರೆಗೆ ವಿಸ್ತರಣೆ ಮಾಡಲಾಗಿದೆ.

ಪತ್ರಕರ್ತ ಸುನೀಲ್ ಹೆಗ್ಗರವಳ್ಳಿ ಹತ್ಯೆಗೆ ಸುಪಾರಿ ನೀಡಿದ ಆರೋಪದ ಮೇಲೆ ಸಿಸಿಬಿ ಪೊಲೀಸರಿಂದ ಬಂಧನಕ್ಕೊಳಗಾಗಿದ್ದ ರವಿ ಬೆಳಗೆರೆ ಅವರಿಗೆ ಸೆಷನ್ಸ್ ಕೋರ್ಟ್ ಡಿಸೆಂಬರ್ 21ರವರೆಗೆ ಷರತ್ತು ಬದ್ದ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಅನಾರೋಗ್ಯದ ಹಿನ್ನೆಲೆಯಲ್ಲಿ ಇಂದು ಮತ್ತೆ ಮಧ್ಯಂತರ ಜಾಮೀನು ಅವಧಿಯನ್ನು ಗುರುವಾರದವರೆಗೆ ವಿಸ್ತರಿಸಿ ನ್ಯಾಯಾಲಯ ಆದೇಶ ನೀಡಿದೆ. ತೀವ್ರ ಸಕ್ಕರೆ ಕಾಯಿಲೆಯಿಂದ ಬಳಲುತ್ತಿರುವ ರವಿ ಬೆಳಗೆರೆ ಅವರನ್ನು ಜಯದೇಶ ಆಸ್ಪತ್ರೆಯ ತೀವ್ರ ನಿಗಾ ಘಟಕಕ್ಕೆ(ಐಸಿಯು) ದಾಖಲಿಸಲಾಗಿದೆ.

RELATED ARTICLES  ವಿಶ್ವಪ್ರಸಿದ್ಧ ತಾಜ್‌ಮಹಲ್‌ನ ಬಣ್ಣ ಬದಲಾಗುತ್ತಿರುವ ಕುರಿತು ಸುಪ್ರೀಂ ಕೋರ್ಟ್ ಕಳವಳ.

ರವಿ ಬೆಳಗೆರೆ ಪರ ವಕೀಲ ದಿವಾಕರ್ ಅವರು ರವಿ ಬೆಳಗೆರೆ ವಿರುದ್ಧ ಪೊಲೀಸರು ಮಾಡಿರುವ ಆರೋಪಗಳು ಸುಳ್ಳು. ಪೊಲೀಸರು ರವಿ ಬೆಳಗೆರೆ ಮನೆ ಮೇಲೆ ದಾಳಿ ನಡೆಸಿದಾಗ 2 ಗನ್ ಸಿಕ್ಕಿವೆ ಎಂದು ಹೇಳುತ್ತಾರೆ. ವಶಪಡಿಸಿಕೊಂಡಿರುವ ಗನ್ ಗಳು ಪರವಾನಗಿ ಪಡೆದಿವೆ. ಮನೆಯಲ್ಲಿ ಸಿಕ್ಕ ಗುಂಡುಗಳು ಕಾನೂನುಬದ್ಧವಾಗಿ ಮಾಡಿದ್ದವು. ಒಂದು ಪಿಸ್ತೂಲ್, 93 ಗುಂಡುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅವುಗಳನ್ನು ಕಾನೂನು ಪ್ರಕಾರವೇ ಖರೀದಿಸಲಾಗಿದೆ ಎಂದು ವಾದ ಮಂಡಿಸಿದರು.

RELATED ARTICLES  ನಿಮ್ಮ ಜನ್ಮರಾಶಿಗೆ ಅನುಗುಣವಾಗಿ (ದಿನಾಂಕ 15-02-2019) ಇಂದಿನ ದಿನ ಫಲಾನುಫಲಗಳು ಹೇಗಿರಲಿದೆ ಗೊತ್ತೆ?