ಕಾರವಾರ: ಪರೇಶ ಮೇಸ್ತಾ ಅನುಮಾನಾಸ್ಪದ ಸಾವಿನ ಬಳಿಕ ಜಿಲ್ಲೆಯಲ್ಲಿ ನಡೆದ ಗಲಭೆ ಪ್ರಕರಣದಲ್ಲಿ ಅಮಾಯಕರನ್ನು ಬಂಧಿಸಲಾಗಿದ್ದು ಅವರನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಜಿಲ್ಲಾಧಿಕಾರಿ ಎಸ್. ಎಸ್. ನಕುಲ್ ಅವರಿಗೆ ಮಂಗಳವಾರ ಮನವಿ ಸಲ್ಲಿಸಿದರು.

ಪರೇಶ್ ಮೇಸ್ತಾ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ವಿವಿಧಡೆ ನಡೆದ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಮತ್ತು ತಮ್ಮ ಇತರ ಕೆಲಸಗಳಿಗೆ ಪಟ್ಟಣಗಳಿಗೆ ಆಗಮಿಸಿದ ಅಮಾಯಕರನ್ನು ಬಂಧಿಸಲಾಗಿದೆ. ಇದರಿಂದ ಅವರ ಕುಟುಂಬದವರು ಆತಂಕಕ್ಕೆ ಒಳಗಾಗಿದ್ದಾರೆ. ಅವರನ್ನು ಕೂಡಲೇ ಬಿಡುಗಡೆ ಮಾಡಬೇಕು. ಈ ಪ್ರಕರಣಕ್ಕೆ ಸಂಬಂಧಿಸದಂತೆ ಅಮಾಯಕರನ್ನು ಮತ್ತೆ ಬಂಧಿಸಬಾರದು ಎಂದು ಮನವಿಯಲ್ಲಿ ಪ್ರಸ್ತಾಪಿಸಿದ್ದಾರೆ.

RELATED ARTICLES  ಮುಖ್ಯಮಂತ್ರಿಗಳ ಪತ್ನಿಯಿಂದ ಗೋಕರ್ಣದಲ್ಲಿ ಪೂಜೆ ಸಲ್ಲಿಕೆ.

ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ, ಘಟನೆಗೆ ಸಂಬಂಧಿಸಿದಂತೆ ಸೂಕ್ತ ದಾಖಲೆ ಹಾಗೂ ವಿಡಿಯೋಗಳನ್ನು ಗಮನಿಸಿ ಕಿಡಿಗೇಡಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ಯಾವುದೇ ಅಮಾಯಕರನ್ನು ಬಂಧಿಸಿಲ್ಲ ಎಂದು ಸ್ಪಷ್ಟ ಪಡಿಸಿದರು.

RELATED ARTICLES  ಟ್ಯಾಂಕರ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ : ಇಬ್ಬರ ಸಾವು

ಪರೇಶ್ ಮೇಸ್ತ ಸಾವಿನ ಕುರಿತು ಸಮಗ್ರ ತನಿಖೆ ನಡೆಯಬೇಕು. ಉದ್ವಿಗ್ನ ವಾತಾವರಣವನ್ನು ಸರಿಪಡಿಸಬೇಕು. ಜಿಲ್ಲೆಯಲ್ಲಿ ಶಾಂತಿ ಸಭೆ ನಡೆಸಿದರೆ ಜನರಲ್ಲಿ ಜಾಗೃತಿ ಮೂಡುತ್ತದೆ. ಈ ನಿಟ್ಟಿನಲ್ಲಿ ಜಿಲ್ಲಾಡಳಿತ ಮುತುವರ್ಜಿ ವಹಿಸಬೇಕು ಎಂದು ಕೋರಿದರು.

ಸಂಘಟನೆ ಜಿಲ್ಲಾಧ್ಯಕ್ಷ ಭಾಸ್ಕರ ಪಟಗಾರ, ಪದಾಧಿಕಾರಿಗಳಾದ ಮಂಜುನಾಥ ಗೌಡ, ಅರುಣ ಹರಕಡೆ, ಪೂರ್ಣಿಮಾ ಮಾಹೇಕರ್, ತುಷಾ ತುಳಸಿದಾಸ ನಾಯ್ಕ, ಸರಸ್ವತಿ ತಾಂಡೇಲ್ ಇತರರಿದ್ದರು.