ದಾಂಡೇಲಿ : ನಗರದ ಹಳಿಯಾಳ ರಸ್ತೆಯ ಅಲೈಡ್ ಏರಿಯಾದಲ್ಲಿ ನಿರ್ಮಾಣ ಹಂತದ ಮನೆಗೆ ಕ್ಯೂರಿಂಗ್ ಮಾಡುತ್ತಿರುವ ಸಂದರ್ಭದಲ್ಲಿ ವಿದ್ಯುತ್ ಶಾಕ್ ತಗುಲಿದ ಪರಿಣಾಮ ವ್ಯಕ್ತಿಯೋರ್ವ ಸಾವನ್ನಪ್ಪಿದ ಘಟನೆ ಸಂಭವಿಸಿದೆ.
ಭಾನುವಾರ ಬೆಳಿಗ್ಗೆ ಈ ಘಟನೆ ನಡೆದಿದ್ದು ಜಾರ್ಖಂಡ್ ಮೂಲದ ಅಲಿ ಅನ್ಸಾರಿ (40) ಎಂಬಾತ ಸಾವನ್ನಪ್ಪಿದ್ದಾರೆ. ಕಳೆದ ಹತ್ತು ವರ್ಷಗಳಿಂದ ನಗರದಲ್ಲಿ ಟೈಲ್ಸ್ ಫಿಟ್ಟಿಂಗ್ ಗುತ್ತಿಗೆದಾರರಾಗಿರುವ ಅಲಿ ಅನ್ಸಾರಿ ಅಲೈಡ್ ಪ್ರದೇಶದಲ್ಲಿ ನೂತನವಾಗಿ ಮನೆ ನಿರ್ಮಿಸುತ್ತಿದ್ದರು. ಮನೆಗೆ ಕ್ಯೂರಿಂಗ್ ಮಾಡುವ ಸಲುವಾಗಿ ನೀರು ಹಾಕುತ್ತಿರುವಾಗ ಕರೆಂಟ್ ಶಾಕ್ ಹೊಡೆದು ಸ್ಥಳದಲ್ಲೆ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ಸ್ಥಳಕ್ಕೆ ದಾಂಡೇಲಿ ನಗರ ಠಾಣೆಯ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.