Satwadhara News

Category: KARWAR

ಉತ್ತರಕನ್ನಡ ಜಿಲ್ಲೆಯ ಕಾರವಾರ ತಾಲೂಕಿನಲ್ಲಿ ನಡೆದ ಕಾರ್ಯಕ್ರಮಗಳ ವರದಿ ಮತ್ತು ಇನ್ನಿತರ ಘಟನಾವಳಿಗಳ ಕ್ಷಣ ಕ್ಷಣದ ಮಾಹಿತಿ ಇಲ್ಲಿದೆ.

  • ಮಚ್ಚಿನಿಂದ ಕೊಚ್ಚಿ ಕೊಲೆ : ಬೆಳ್ಳಂಬೆಳಗ್ಗೆ ಕಾರವಾರದಲ್ಲಿ ನಡೆದ ಘಟನೆ.

    ಮಚ್ಚಿನಿಂದ ಕೊಚ್ಚಿ ಕೊಲೆ : ಬೆಳ್ಳಂಬೆಳಗ್ಗೆ ಕಾರವಾರದಲ್ಲಿ ನಡೆದ ಘಟನೆ.

    ಕಾರವಾರ : ಕಾರವಾರ ತಾಲೂಕಿನ ಹಣಕೋಣದಲ್ಲಿ ಬೆಳಂಬೆಳಿಗ್ಗೆ ಉದ್ಯಮಿಯನ್ನು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ ಘಟನೆ ನಡೆದಿದೆ. ಮಹಾರಾಷ್ಟ್ರದ ಪುಣೆಯ ಎಲಕ್ಟ್ರಾನಿಕ್ ವಸ್ತುಗಳ ಮಾರಾಟ ಮಾಡುತಿದ್ದ ಉದ್ಯಮಿ ವಿನಾಯಕ ನಾಯ್ಕ (52) ಕೊಲೆಯಾದ ದುರ್ದೈವಿ.

    ಇನ್ನು ಇವರ ಪತ್ನಿ ವೈಶಾಲಿಗೆ ಗಂಭೀರ ಗಾಯವಾಗಿದ್ದು ಕಾರವಾರದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇಂದು ಹಣಕೊಣ ದಿಂದ ಪುಣೆಗೆ ಹೊರಡಲು ಸಿದ್ದವಾಗಿದ್ದ ಇವರಿಗೆ ಐದು ಜನರ ತಂಡ ಕಾರಿನಲ್ಲಿ ಬಂದು ಹತ್ಯೆ ನಡೆಸಿ ಹೋಗಿದ್ದು ವಿನಯ್ ರವರ ಸಹೋದರಿ ಉಜ್ವಲ್ ರವರು ಕರೆ ಮಾಡಿದರೂ ಸ್ವೀಕರಿಸದ ಕಾರಣ ಕಾರವಾರದಲ್ಲಿದ್ದ ಸಹೋದರಿ ಹಣಕೋಣದ ಇವರ ಮನೆಗೆ ತೆರಳಿದಾಗ ಪ್ರಕರಣ ಬೆಳಕಿಗೆ ಬಂದಿದೆ.

  • ನಿಲ್ಲಿಸಿದ್ದ ಬೊಲೆರೊ ವಾಹನಕ್ಕೆ ಬೈಕ್ ಡಿಕ್ಕಿ

    ನಿಲ್ಲಿಸಿದ್ದ ಬೊಲೆರೊ ವಾಹನಕ್ಕೆ ಬೈಕ್ ಡಿಕ್ಕಿ

    ಯಲ್ಲಾಪುರ: ನಿಲ್ಲಿಸಿದ್ದ ಬೊಲೆರೊ ವಾಹನಕ್ಕೆ ಬೈಕ್ ಡಿಕ್ಕಿ ಹೊಡೆದು ಸವಾರ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಸಬಗೇರಿ ಬಳಿ ನಡೆದಿದೆ. ಕಾಳಮ್ಮನಗರದ ಇಮಾಮ್ ಖಾಸೀಂ ಮೆಹಬೂಬಲಿ ಮುಲ್ಲಾನವರ ಗಾಯಗೊಂಡ ಸವಾರ. ಈತ ಯಲ್ಲಾಪುರದಿಂದ ಅಂಕೋಲಾ ಕಡೆಗೆ ವೇಗವಾಗಿ ಬೈಕ್ ಚಲಾಯಿಸಿಕೊಂಡು ಬಂದು ಸಬಗೇರಿ ಬಳಿ ಮನೆಯ ಎದುರು ನಿಲ್ಲಿಸಿಟ್ಟಿದ್ದ ಬುಲೆರೊಗೆ ಡಿಕ್ಕಿ ಹೊಡೆದಿದೆ. ಎರಡೂ ವಾಹನಗಳು ಜಖಂಗೊಂಡಿದ್ದು, ಬೈಕ್ ಸವಾರ ಗಾಯಗೊಂಡಿದ್ದಾನೆ. ಈ ಕುರಿತು ಯಲ್ಲಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಹಳಿ ತಪ್ಪಿದ ರೈಲು : ಹಲವು ರೈಲುಗಳ ಮಾರ್ಗ ಬದಲು

    ಹಳಿ ತಪ್ಪಿದ ರೈಲು : ಹಲವು ರೈಲುಗಳ ಮಾರ್ಗ ಬದಲು

    ಜೋಯಿಡಾ : ಕ್ಯಾಸಲ್ ರಾಕ್ ಬಳಿ ರೇಲ್ವೆ ಮಾರ್ಗದಲ್ಲಿ ರೈಲೊಂದು ಹಳಿ ತಪ್ಪಿದ ಘಟನೆ ಶುಕ್ರವಾರ ಬೆಳಿಗ್ಗೆ ಸಂಭವಿಸಿದೆ. ದೂದ್ ಸಾಗರ ಹಾಗೂ ಸೋನಾಲಿಮ್ ನಡುವೆ ಈ ಘಟನೆ ನಡೆದಿದ್ದು ಕಲ್ಲಿದ್ದಲು ಹೊತ್ತ ರೈಲಿನ ಸುಮಾರು 11 ಭೋಗಿ ಕೆಳಕ್ಕೆ ಜಾರಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಪಾಯ ಸಂಭವಿಸಿಲ್ಲ.

    ದೂದ್ ಸಾಗರ್‌ನಿಂದ ಸೋನಾಲಿಂ ನಡುವಿನ ಸುರಂಗ ಸಂಖ್ಯೆ 15ರ ಸಮೀಪ ತೋರಣಗಲ್ ಹೊಸಪೇಟೆಯಲ್ಲಿ ವಾಸ್ಕೋದಿಂದ ಜಿಂದಾಲ್ ಕಂಪನಿಗೆ ಕಲ್ಲಿದ್ದಲು ಸಾಗಿಸುವ ಸರಕು ರೈಲು ದಬ್ಬೆಯಲ್ಲಿ ಹಳಿ ತಪ್ಪಿದೆ. ಸದ್ಯ ಈ ಮಾರ್ಗದಲ್ಲಿ ಎಲ್ಲಾ ರೈಲು ಸಂಚಾರ ಸ್ಥಗಿತ ಮಾಡಲಾಗಿದೆ.

    ಈ ಮಾರ್ಗದಲ್ಲಿ ಸಂಚರಿಸುವ ರೈಲು ಸಂಖ್ಯೆ 17309 ಯಶವಂತಪುರ ದಿಂದ ವಾಸ್ಕೋಡಿ ಹಾಗೂ 17310 ವಾಸ್ಕೋಡಿಯಿಂದ ಯಶವಂತಪುರಕ್ಕೆ ಹೋಗುವ ಎರಡು ರೈಲುಗಳು ರದ್ದು ಮಾಡಲಾಗಿದೆ.ಇಂದು ಸಂಜೆ ತೆರಳುವ ಗೋವಾ ಎಕ್ಸ್‌ಪ್ರೆಸ್‌ ರೈಲು ಮಾರ್ಗ ಬದಲಾವಣೆ ಮಾಡಲಾಗಿದೆ. ಅದರಂತೆ ಹುಬ್ಬಳ್ಳಿ, ಬೆಳಗಾವಿಯಿಂದ ಗೋವಾಕ್ಕೆ ಸಂಚರಿಸುವ ರೈಲಿನಲ್ಲಿ ವ್ಯತ್ಯಯ ಆಗಬಹುದು.

    ಘಟನೆಯಿಂದಾಗಿ ಮಡಗಾಂವನಿಂದ ಬೆಳಗಾವಿ ಮತ್ತು ಹುಬ್ಬಳ್ಳಿ ಕಡೆ ತೆರಳುವ ರೈಲುಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ. ನೈರುತ್ಯ ವಲಯದ ಹುಬ್ಬಳ್ಳಿ ವಿಭಾಗದಲ್ಲಿ ಈ ಘಟನೆ ನಡೆದಿದೆ.

  • ಉತ್ತರಕನ್ನಡ ಎಸ್.ಪಿ ಹೆಸರಲ್ಲಿಯೇ ನಕಲಿ ಖಾತೆ ಸೃಷ್ಟಿ

    ಉತ್ತರಕನ್ನಡ ಎಸ್.ಪಿ ಹೆಸರಲ್ಲಿಯೇ ನಕಲಿ ಖಾತೆ ಸೃಷ್ಟಿ

    ಕಾರವಾರ : ಎಸ್.ಪಿ ಎಂ. ನಾರಾಯಣ್ ರವರ ಹೆಸರಲ್ಲಿ ಫೇಸ್ ಬುಕ್ ನಕಲಿ ಖಾತೆ ಮಾಡಿ ಕಳ್ಳರು friend request ನೀಡಿ ಹಣ ಕೇಳಿ ವಂಚಿಸುತಿದ್ದಾರೆ.

    ಸೈಬರ್ ಕಳ್ಳರು ಹಣ ವಂಚಿಸಿದ್ರು ಅಂತ ಪೊಲೀಸ್ ಠಾಣೆ ಮೆಟ್ಟಿಲೇರೋದು ಸಾಮಾನ್ಯ . ಆದ್ರೆ ಇದೀಗ ಉತ್ತರ ಕನ್ನಡ ಜಿಲ್ಲೆಯ ಪೊಲೀಸ್ ವರಿಷ್ಟಾಧಿಕಾರಿ ಎಂ. ನಾರಾಯಣ್ ರವರೇ ಸೈಬರ್ ಕ್ರೈಮ್ ಠಾಣೆ ಮೊರೆಹೋಗಿದ್ದಾರೆ.

    ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿದ ಎಸ್.ಪಿ ಎಂ‌. ನಾರಾಯಣ್ ರವರು ನನ್ನ ಹೆಸರಿನಲ್ಲಿ ನಕಲಿ ಖಾತೆ ಮಾಡಿ ಹಣ ಕೇಳುತಿದ್ದಾರೆ. ಆ ಅಕೌಂಟ್ ನಕಲಿಯಾಗಿದೆ. ಯಾರೂ ಹಣ ನೀಡಿ ವಂಚನೆಗೆ ಒಳಗಾಗಬೇಡಿ ಎಂದು ಪತ್ರಿಕಾ ಪ್ರಕಟಣೆ ನೀಡಿದ್ದಾರೆ.

    ಇದಲ್ಲದೇ ಸೈಬರ್ ಕ್ರೈಮ್ ವಿಭಾಗದಲ್ಲಿ ದೂರು ಸಹ ದಾಖಲಿಸಿದ್ದಾರೆ. ಹೀಗಾಗಿ ಯಾರೂ ಸಹ ಇಂತಹ ಫೇಕ್ ಅಕೌಂಟ್ ನಂಬಿ ಮೋಸ ಹೋಗದಿರಿ.

  • ಕುಸಿದು ಬಿತ್ತು ಸೇತುವೆ : ಮುಳುಗಿದೆ ವಾಹನ..? ಮಳೆಯ ಅವಾಂತರಕ್ಕೆ ಹೆದ್ದಾರಿ ಬಂದ್..!

    ಕುಸಿದು ಬಿತ್ತು ಸೇತುವೆ : ಮುಳುಗಿದೆ ವಾಹನ..? ಮಳೆಯ ಅವಾಂತರಕ್ಕೆ ಹೆದ್ದಾರಿ ಬಂದ್..!

    ಕಾರವಾರ : ಇಲ್ಲಿನ ಸದಾಶಿವಘಡ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸುಮಾರು 45 ವರ್ಷಗಳ ಹಿಂದೆ ನಿರ್ಮಿತವಾದ ಕಾಳಿ ಸೇತುವೆ ಕುಸಿದು ಬಿದ್ದು, ಲಾರಿ ಮುಳುಗಡೆಯಾಗಿರುವ ಘಟನೆ ನಡೆದಿದೆ.

    ಗೋವಾದಿಂದ ಮಂಗಳೂರು ಕಡೆ ಚಲಿಸುತ್ತಿದ್ದ ಲಾರಿ ಕಾಳಿ ನದಿಯಲ್ಲಿ ಮುಳುಗಡೆಯಾಗಿದ್ದು, ಲಾರಿ ಚಾಲಕನ ರಕ್ಷಣೆ ಮಾಡಲಾಗಿದೆ. ಚಾಲಕ‌ನ ಸ್ಥಿತಿ ಗಂಭೀರವಾಗಿದೆ. ಸದ್ಯ ಆತನಿಗೆ ಕಾರವಾರ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

    ಕಾರವಾರದ ಮೂಲಕ ಹರಿಯುವ ಕಾಳಿ ನದಿಗೆ.1983ರಲ್ಲಿ ಈ ನದಿಯ ಮೇಲೆ ನಿರ್ಮಿಸಲಾದ ಸೇತುವೆಯು ಕರ್ನಾಟಕವನ್ನು ಗೋವಾದೊಂದಿಗೆ ಸಂಪರ್ಕಿಸುವ ಸೇತುಗೆ ಇದಾಗಿತ್ತು. ನದಿ ಮತ್ತು ಸಮುದ್ರದ ಸಂಗಮ ಸ್ಥಳದ ಮೇಲೆ ಸೇತುವೆಯನ್ನು ನಿರ್ಮಿಸಿರುವುದರಿಂದ ಇದು ಪ್ರವಾಸಿಗರ ಅಚ್ಚುಮೆಚ್ಚಿನ ಸ್ಥಳ ಸಹ ಆಗಿತ್ತು.‌ಈ ಸೇತುವೆಯ ಮೇಲೆ ಅನೇಕ ಕನ್ನಡ ಹಾಗೂ ಹಿಂದಿ ಸಿನಿಮಾಗಳು ಸಹ ಚಿತ್ರೀಕರಣ ಮಾಡಲಾಗಿತ್ತು. ನದಿಯು ಸಮುದ್ರವನ್ನು ಸೇರುವ ಸ್ಥಳವು ಸ್ಪಷ್ಟವಾಗಿ ಗೋಚರಿಸುವ ಕೆಲವು ಸ್ಥಳಗಳಲ್ಲಿ ಇದು ಒಂದಾಗಿದೆ.

    ಇನ್ನು ಜಿಲ್ಲೆಯ ಕಾರವಾರ ನಗರದ ರಾಷ್ಟ್ರೀಯ ಹೆದ್ದಾರಿ 66 ರ ಗೋವಾ- ಕಾರವಾರ ಹೆದ್ದಾರಿ ಸಂಚಾರವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾರವರು ಆದೇಶಿಸಿದ್ದಾರೆ.

    ಇದಲ್ಲದೇ ಈ ಆದೇಶ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹಾಗೂ IRB ಕಂಪನಿ ಕಾಳಿ ನದಿ ಸೇತುವೆ ಭದ್ರತೆ ಕುರಿತು ವರದಿ ನೀಡುವ ವರೆಗೆ ಸಂಪೂರ್ಣ ಬಂದ್ ಇರಲಿದೆ.

    ಉತ್ತರ ಕನ್ನಡ ಜಿಲ್ಲೆಯಲ್ಲಿ ಐ.ಆರ್.ಬಿ ಕಂಪನಿ ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಅವೈಜ್ಞಾನಿಕ ಕಾಮಗಾರಿಯಿಂದಾಗಿ ಹೆದ್ದಾರಿಯಲ್ಲಿ ದುರಂತ ನಡೆಯುತ್ತಿದೆ. ಇದಲ್ಲದೇ ಹೊಸ ಸೇತುವೆ ನಿರ್ಮಿಸುವ ಬದಲು ಒಂದುಭಾಗದಲ್ಲಿ ಮಾತ್ರ ಹೊಸ ಸೇತುವೆ ನಿರ್ಮಿಸಿ ಇನ್ನೊಂದು ಭಾಗದಲ್ಲಿ 41 ವರ್ಷದ ಹಿಂದೆ ನಿರ್ಮಿಸಿರುವ ಸೇತುವೆಯಲ್ಲಿ ಸಂಚಾರಕ್ಕೆ ವ್ಯವಸ್ಥೆ ಮಾಡಿದ್ದು ಸೇತುವೆ ಭದ್ರವಾಗಿರದಿದ್ದರೂ ಇನ್ನೊಂದು ಸೇತುವೆ ನಿರ್ಮಿಸದೇ ನಿರ್ಲಕ್ಷ ವಹಿಸಿ ಇಂದಿನ ದುರಂತಕ್ಕೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಕಾರವಾರ ನಗರ ಠಾಣೆಯಲ್ಲಿ BNS ಕಲಂ 110, 125 ,285 ನಡಿ ಪ್ರಕರಣ ದಾಖಲು ಮಾಡಲಾಗಿದೆ.

  • ಅಂಗಡಿಯ ಮೇಲೆ ಕುಸಿದ ಗುಡ್ಡ : ಐವರು ಮಣ್ಣಿನಡಿಗೆ? ರಸ್ತೆ ಸಂಚಾರ ಬಂದ್..!

    ಅಂಗಡಿಯ ಮೇಲೆ ಕುಸಿದ ಗುಡ್ಡ : ಐವರು ಮಣ್ಣಿನಡಿಗೆ? ರಸ್ತೆ ಸಂಚಾರ ಬಂದ್..!

    ಅಂಕೋಲಾ : ಜಿಲ್ಲೆಯಲ್ಲಿ ರಣಭೀಕರ ಮಳೆಯಾಗುತ್ತಿದ್ದು, ರಾಷ್ಟ್ರೀಯ ಹೆದ್ದಾರಿ ೬೬ರ ಶಿರೂರು ಬಳಿ ಭಾರೀ ಗುಡ್ಡಕುಸಿತ ಸಂಭವಿಸಿದೆ. ಅಂಗಡಿಯೊಂದರ ಮೇಲೆ ಗುಡ್ಡ ಕುಸಿದು ಬಿದ್ದು, ಟೀ ಸ್ಟಾಲ್ ಸೇರಿ ಹಲವು ಅಂಗಡಿಗಳಿಗೆ ಹಾನಿಯಾಗಿವೆ. ಐದಕ್ಕೂ ಹೆಚ್ಚು ಮಂದಿ ಗುಡ್ಡದ ಮಣ್ಣಿನಡಿ ಸಿಲುಕಿರುವ ಶಂಕೆ ಇದೆ. ಒಂದೇ ಕುಟಂಬದ ಐವರು ಮಣ್ಣಿನಡಿ ಸಿಲುಕಿದ್ದಾರೆ ಎನ್ನಲಾಗಿದೆ. ಲಕ್ಷ್ಮಣ ನಾಯ್ಕ(47), ಶಾಂತಿ ನಾಯ್ಕ(36), ರೋಶನ(11), ಅವಂತಿಕಾ(6), ಜಗನ್ನಾಥ(55) ಎಂಬುವವರು ಮಣ್ಣಿನಡಿ ಸಿಲುಕಿದ್ದಾರೆ ಎನ್ನಲಾಗಿದೆ.

    ಐವರು ಸದಸ್ಯರ ಕುಟುಂಬ ವಾಸವಿದ್ದ ಅಂಗಡಿ ಮೇಲೆ ಗುಡ್ಡ ಕುಸಿದಿದೆ. ಗ್ರಾಹಕರು ಸೇರಿ ಮನೆಯವರು ಮಣ್ಣಿನಡಿ ಸಿಲುಕಿರುವ ಶಂಕೆ ಇದೆ. ಧಾರಾಕಾರ ಮಳೆಯಿಂದಾಗಿ ಹೆದ್ದಾರಿ ಪಕ್ಕದ ಗುಡ್ಡ ಸಡಿಲಗೊಂಡಿತ್ತು. ಗಂಗಾವಳಿ ನದಿಗೆ ಹೊಂದಿಕೊಂಡಿರುವ ಶಿರೂರು ಪ್ರದೇಶ ಇದಾಗಿದೆ. ರಾಷ್ಟ್ರೀಯ ಹೆದ್ದಾರಿ ೬೬ರ ಅಂಕೋಲಾ-ಕುಮಟಾ ನಡುವೆ ಸಂಚಾರ ಸಂಪೂರ್ಣ ಬಂದ್ ಆಗಿದೆ.

    ಐಆರ್‌ಬಿ ಕಂಪೆನಿಯಿಂದ ಮಣ್ಣು ತೆರವು ಕಾರ್ಯಾಚರಣೆ ನಡೆಯುತ್ತಿದೆ. ಸ್ಥಳಕ್ಕೆ ಅಂಕೋಲಾ ಪೊಲೀಸ್, ಅಗ್ನಿಶಾಮಕ ಸಿಬ್ಬಂದಿ, ಎನ್‌ಹೆಚ್‌ಎಐ ಆಂಬ್ಯುಲೆನ್ಸ್ ದೌಡಾಯಿಸಿದೆ.

  • ಉತ್ತರಕನ್ನಡಕ್ಕೆ ನೂತನ ಡಿ.ಸಿ ನೇಮಕ.

    ಉತ್ತರಕನ್ನಡಕ್ಕೆ ನೂತನ ಡಿ.ಸಿ ನೇಮಕ.

    ಕಾರವಾರ : ಉತ್ತರಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ಜನಪರವಾದ ಕೆಲಸ ಕಾರ್ಯಗಳ ಮೂಲಕ ಜನರ ಗಮನ ಸೆಳೆದಿದ್ದ ಶ್ರೀಮತಿ ಗಂಗೂಬಾಯಿ ಮಾನಕರ್ ವಾರ್ಗಾವಣೆಗೊಂಡಿದ್ದು, ಅವರ ಸ್ಥಾನಕ್ಕೆ ಜಿಲ್ಲಾಧಿಕಾರಿಯಾಗಿ ಶ್ರೀಮತಿ ಕೆ. ಲಕ್ಷ್ಮಿಪ್ರಿಯಾ ಇವರನ್ನು ನೇಮಕಮಾಡಲಾಗಿದೆ.

  • ಭಾರತ ಟಿ20 ವಿಶ್ವ ಕಪ್ ಗೆದ್ದ ರೀತಿಯಲ್ಲಿ ಪೊಲೀಸ್ ಇಲಾಖೆಯಿಂದ ಜಿಲ್ಲೆಯ ಜನರ ಮನಸ್ಸಿನ ಕಪ್ ಗೆಲ್ಲುತ್ತೇವೆ : ಎಸ್.ಪಿ

    ಭಾರತ ಟಿ20 ವಿಶ್ವ ಕಪ್ ಗೆದ್ದ ರೀತಿಯಲ್ಲಿ ಪೊಲೀಸ್ ಇಲಾಖೆಯಿಂದ ಜಿಲ್ಲೆಯ ಜನರ ಮನಸ್ಸಿನ ಕಪ್ ಗೆಲ್ಲುತ್ತೇವೆ : ಎಸ್.ಪಿ

    ಕಾರವಾರ:ಉತ್ತರ ಕನ್ನಡ ಶಾಂತಿ ಸುವ್ಯವಸ್ಥೆ ಮತ್ತು ಕೋಮು ಸೌಹಾರ್ದತೆ ಕಾಪಾಡಲು ಹೆಚ್ಚಿನ ಆದ್ಯತೆ ನೀಡಲಿದ್ದು, ಜಿಲ್ಲೆಯಲ್ಲಿನ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಿ, ಜಿಲ್ಲೆಯಲ್ಲಿ ಅಪರಾಧ ಸಂಖ್ಯೆಗಳನ್ನು ಕಡಿಮೆ ಮಾಡಿ, ಜನಸ್ನೇಹಿ ಪೊಲೀಸ್ ವ್ಯವಸ್ಥೆ ಮಾಡುವುದಾಗಿ ನೂತನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ ನಾರಾಯಣ ಹೇಳಿದರು.

    ಅವರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯಲ್ಲಿ ಅಧಿಕಾರ ವಹಿಸಿಕೊಂಡು ಮಾತನಾಡಿದರು.

    ಬಹುತೇಕ ಅರಣ್ಯ ಪ್ರದೇಶದಿಂದ ಕೂಡಿಕೊಂಡಿರುವ ಉತ್ತರ ಕನ್ನಡ ಜಿಲ್ಲೆ ಪ್ರಕೃತಿ ಸೌಂದರ್ಯದಿAದ ಭರಿತವಾಗಿದೆ. ಗಡಿಭಾಗದ ಜಿಲ್ಲೆಯಾಗಿರುವುದರಿಂದ ಇಲ್ಲಿ ಕೆಲಸ ಮಾಡುವುದು ಚಾಲೆಂಜ್‌ಯಾಗಿದ್ದು, ಜಿಲ್ಲೆಯ ಎಲ್ಲರ ಸಹಕಾರದಿಂದ ಪೊಲೀಸ್ ಅಧಿಕಾರಿಗಳು ಸಿಬ್ಬಂದಿಗಳ ಜೊತೆಗೂಡಿ ಜನರಿಗೆ ಉತ್ತಮ ಸೇವೆ ನೀಡಲಾಗುವುದು ಎಂದರು.

    ಉತ್ತರ ಕನ್ನಡ ಜಿಲ್ಲೆ ಹೊಸ ಜಿಲ್ಲೆಯಲ್ಲ… ಈ ಹಿಂದೆ ಜಿಲ್ಲೆಯ ಭಟ್ಕಳದಲ್ಲಿ ಕಾರ್ಯನಿರ್ವಹಿಸಿದ ಅನುಭವವಿದ್ದು, ಮರಳಿ ಮನೆಗೆ ಬಂದ ಹಾಗೆ ಆಗಿದೆ… ಜಿಲ್ಲೆಯ ಜನರ ರಕ್ಷಣೆ ಪೊಲೀಸ್ ಇಲಾಖೆ ಮೇಲೆ ಇದ್ದು, ಯಾರೂ ಕೂಡಾ ಕಾನುನುನ್ನು ದುರುಪಯೋಗ ಪಡಿಸಿಕೊಂಡು ಅಮಾಯಕರ ಮೇಲೆ ಸುಳ್ಳು ಕೇಸ್ ನೀಡಬಾರದು. ರಾಜ್ಯದ ಗುಪ್ತಚರ ವಿಭಾಗದಲ್ಲಿ ಕಾರ್ಯನಿರ್ವಹಿಸಿರುವುದರಿಂದ, ಜಿಲ್ಲೆಯ ಪತ್ರಿಯೊಂದು ಹಳ್ಳಿಯ ಇಂಚಿAಚು ಗೊತ್ತಿದೆ. ಪ್ರತಿ ಹೋಬಳಿಯಲ್ಲಿ ಮಾಹಿತಿದಾರರಿದ್ದು, ಕಾನೂನನ್ನು ಯಾರು ದುರುಪಯೋಗ ಮಾಡಿಕೊಳ್ಳಬಾರದು ಒಂದು ವೇಳೆ ಕಾನೂನು ದುರುಪಯೋಗ ಮಾಡಿಕೊಂಡಲ್ಲಿ ಅಂತಹವರ ವಿರುದ್ಧ ಹೊಸ ಕಾನೂನಿಂತೆ ಕ್ರಮ ಕೈಗೊಂಡು ಹೆಡೆಮುರಿ ಕಟ್ಟಲಾಗುವುದು ಎಂದರು.

    ಯಾವುದೇ ರೀತಿಯ ಸಮಸ್ಯೆಗಳಿದ್ದಲ್ಲಿ ಗಮನಕ್ಕೆ ತಂದರೆ ಸಮಸ್ಯೆ ಪರಿಹಾರಕ್ಕೆ ಪ್ರಯತ್ನಿಸಲಾಗುವುದು ಹಾಗೂ ಜಿಲ್ಲೆಯ ಹೆದ್ದಾರಿಯಲ್ಲಿ ಆಗುತ್ತಿರುವ ಅಪಘಾತ ಪ್ರಕರಣಗಳ ಬಗ್ಗೆ ಮಾಹಿತಿ ಇದ್ದು, ರಾಷ್ಟಿçÃಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ಜೊತೆ ಚರ್ಚಿಸಿ ಅಪಘಾತ ವಲಯದಲ್ಲಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡು ಅಪಘಾತ ಪ್ರಕರಣಗಳನ್ನು ಕಡಿಮೆ ಮಾಡಲಾಗುವುದು ಮತ್ತು ನಗರಗಳಲ್ಲಿ ಟ್ರಾಫಿಕ್ ನಿಯಮ, ಸಿಸಿಟಿವಿ ಅಳವಡಿಕೆ ಸೇರಿದಂತೆ ಎಲ್ಲಾ ಸುರಕ್ಷಾ ಕ್ರಮಗಳನ್ನು ಕೈಗೊಂಡು ಟ್ರಾಫೀಕ್ ನಿಯಮ ಕಟ್ಟುನಿಟ್ಟಾಗಿ ಜಾರಿಗೆ ತರಲಾಗುವುದು ಎಂದರು.

    ಜಿಲ್ಲೆಯು ಪ್ರಮುಖ ಪ್ರವಾಸಿ ತಾಣವಾಗಿದ್ದು, ಇಲ್ಲಿಗೆ ಬರುವ ಪ್ರವಾಸಿಗರಿಗೆ ಯಾವುದೇ ತೊಂದರೆಯಾಗದAತೆ ಕ್ರಮ ಕೈಗೊಳ್ಳಲಾಗುವುದು, ಪೊಲೀಸ್ ಗುಪ್ತಚರ ವಿಭಾಗವನ್ನು ಇನ್ನಷ್ಟು ಬಲಪಡಿಸಲಾಗುವುದು, ಈ ಹಿಂದೆ ಭಟ್ಕಳದಲ್ಲಿ ಕೆಲಸ ನಿರ್ವಹಿಸಿರುವ ಅನುಭವವಿದ್ದು, ಜಿಲ್ಲೆಯ ಬಗ್ಗೆ ತಿಳಿದಿದೆ ಎಂದರು.

    ಜಿಲ್ಲೆಯ ಜನರು, ವಿವಿಧ ಇಲಾಖೆಗಳು ಮತ್ತು ಮಾಧ್ಯಮದವರ ಸಹಕಾರದಿಂದ ಹಾಗೂ ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಅಹಿತಕರ ಘಟನೆಗಳು ಜರುಗದಂತೆ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಲಾಗುವುದು ಎಂದರು.

    ಸೋಷಿಯಲ್ ಮೀಡಿಯಾದಲ್ಲಿ ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ಧ ಹದ್ದಿನ ಕಣ್ಣು ಇಡಲಾಗಿದೆ. ಯಾವುದೇ ಮಾಹಿತಿಯನ್ನು ಪರಾಮರ್ಶಿಸದೇ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳಬಾರದು. ಜಿಲ್ಲೆಯಲ್ಲಿ ಕೋಮು ಸೌಹಾರ್ದತೆ, ಶಿಸ್ತು, ಕಾನೂನು ಸುವ್ಯವಸ್ಥೆ ಕಾಪಾಡಿಕೊಂಡು ಭಾರತ ಟಿ20 ವಿಶ್ವ ಕಪ್ ಗೆದ್ದ ರೀತಿಯಲ್ಲಿ ಪೊಲೀಸ್ ಇಲಾಖೆಯಿಂದ ಜಿಲ್ಲೆಯ ಜನರ ಮನಸ್ಸಿನ ಕಪ್ ಗೆಲ್ಲುತ್ತೇವೆ ಎಂದರು.

    ಈ ಸಂದರ್ಭದಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಜಯಕುಮಾರ್ ಹಾಗೂ ಜಿಲ್ಲೆಯ ಎಲ್ಲಾ ಡಿವೈಎಸ್‌ಪಿಗಳು, ಪೊಲೀಸ್ ಇಲಾಖೆಯ ಅಧಿಕಾರಿಗಳು ಮತ್ತಿತರರು ಇದ್ದರು

  • ಕಡಲ ತೀರದಲ್ಲಿ ಕಂತೆ ಕಂತೆ ನಿರೋಧ ಪ್ಯಾಕ್ ಪತ್ತೆ ..!

    ಕಡಲ ತೀರದಲ್ಲಿ ಕಂತೆ ಕಂತೆ ನಿರೋಧ ಪ್ಯಾಕ್ ಪತ್ತೆ ..!

    ಕಾರವಾರ : ಸಮುದ್ರದ ಅಲೆಗೆ ಕಸದ ರಾಶಿ ತೇಲಿ ಬರುವುದು ಸಾಮಾನ್ಯ. ಆದರೆ ನಗರದ ರವೀಂದ್ರನಾಥ ಟ್ಯಾಗೋರ್ ಕಡಲತೀರದಲ್ಲಿ 30ಕ್ಕೂ ಹೆಚ್ಚು ನಿರೋಧ ಪ್ಯಾಕೇಟ್‌ಗಳು ಕಂಡು ಬಂದಿದೆ. ರವೀಂದ್ರನಾಥ ಟ್ಯಾಗೋರ್ ಕಡಲತೀರದ ಫುಡ್‌ಕೋರ್ಟ್ ಹಿಂಭಾಗದ ಒಂದೇ ಸ್ಥಳದಲ್ಲಿ ಈ ನಿರೋಧ ಪ್ಯಾಕೆಟ್‌ಗಳು ಬಿದ್ದಿವೆ. ಗುಲಾಬಿ ಬಣ್ಣದ ಈ ಪ್ಯಾಕೇಟಿನ ಮೇಲೆ ಭಾರತ ಸರಕಾರ ಎಂದು ನಮೂದಿಸಿದೆ. ಸಮುದ್ರ ಅಲೆಗಳಿಂದ ದಡಕ್ಕೆ ಬಂದು ಸೇರಿರಬಹುದು ಅಥವಾ ಕಡಲ ತೀರದ ಬಳಿಯ ಮೈದಾನದಿಂದ ಹರಿದು ಬರುವ ನೀರು ಸಮುದ್ರ ಸೇರುವ ಕಡೆ ನೈಸರ್ಗಿಕವಾಗಿ ನಾಲೆಯೊಂದು ಸೃಷ್ಟಿಯಾಗಿದ್ದು ಅಲ್ಲಿಂದಲೇ ನೀರಿನೊಂದಿಗೆ ಕಸ ಸಮುದ್ರ ಸೇರುತ್ತಿದೆ.

    ನಿರೋದ್ ಪ್ಯಾಕೆಟ್‌ಗಳು ಕೂಡ ಅದೇ ರೀತಿ ತೇಲಿ ಬಂದಿರಬಹುದು ಹೇಳಲಾಗುತ್ತಿದೆ. ಆದರೆ ಸರಕಾರಿ ಆಸ್ಪತ್ರೆಯಲ್ಲಿ ಸಿಗುವ ನಿರೋಧ ಪ್ಯಾಕೇಟ್ ಗಳು ಕಡಲತೀರದಲ್ಲಿ ಬಿದಿರುವುದು ಜನರಲ್ಲಿ ಅಚರಿ ಮೂಡಿಸಿದೆ.

  • ಯಕ್ಷಗಾನ‌ ಲೋಕದ ಗಾನ ಮಾಂತ್ರಿಕ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ.

    ಯಕ್ಷಗಾನ‌ ಲೋಕದ ಗಾನ ಮಾಂತ್ರಿಕ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ.

    ಕುಮಟಾ : ಯಕ್ಷಗಾನದ ಬಡಗುತಿಟ್ಟಿನ ಶ್ರೇಷ್ಠ ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಬೆಂಗಳೂರಿನ ಮನೆಯಲ್ಲಿ ಇಂದು ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ ಎಂದು ವರದಿಯಾಗಿದೆ. ಇವರಿಗೆ 67 ವರ್ಷ ವಯಸ್ಸಾಗಿತ್ತು. ʼಗಾನಕೋಗಿಲೆʼ ಎಂದೇ ಅಭಿಮಾನಿಗಳ ಮನದಲ್ಲಿ ನೆಲೆಯೂರಿರುವ, ಭಾಗವತರ ಅಂತ್ಯಕ್ರಿಯೆ ಇಂದು ಸಂಜೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ನಾಗೂರಿನ ಸ್ವಗೃಹದಲ್ಲಿ ನಡೆಯಲಿದೆ. ಸುಮಾರು 46 ವರ್ಷಗಳ ಕಾಲ ಯಕ್ಷಗಾನ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿರುವ ಅವರು, ಪತ್ನಿ, ಪುತ್ರ ಹವ್ಯಾಸಿ ಕಲಾವಿದ ಕಾರ್ತಿಕ್ ಹಾಗೂ ಪುತ್ರಿಯನ್ನು ಅಗಲಿದ್ದಾರೆ.

    1957ರ ಸೆ.5ರಂದು ಜನಿಸಿದ ಅವರನ್ನು ಯಕ್ಷರಂಗದ ತಜ್ಞ ಭಾಗವತರೆಂದೇ ಗುರುತಿಸಲಾಗುತ್ತಿತ್ತು. ಯಕ್ಷಗಾನದ ಹೊಸ ಹಾಗೂ ಹಳೆಯ ಪ್ರಸಂಗಗಳ ಪರಿಣಿತರಾಗಿದ್ದರು. ಕೋಟ ಅಮೃತೇಶ್ವರಿ ಮೇಳ, ಪೆರ್ಡೂರು ಮೇಳಗಳಲ್ಲಿ ಭಾಗವತರಾಗಿ, ಹೊಸರಾಗಗಳನ್ನು ಹೊಸ ತಾಂತ್ರಿಕತೆಯನ್ನು ಯಕ್ಷರಂಗದಲ್ಲಿ ಯಶಸ್ವಿಯಾಗಿ ಬಳಸಿದರು.

    ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಸಹಿತ ಹಲವಾರು ಪ್ರಶಸ್ತಿ, ಸನ್ಮಾನಗಳಿಗೆ ಪಾತ್ರರಾಗಿರುವ ಧಾರೇಶ್ವರ ಅವರು ಗುರುಗಳಾದ ನಾರಾಯಣಪ್ಪ ಉಪ್ಪೂರರನ್ನು ಸದಾ ಸ್ಮರಿಸುತ್ತಿದ್ದರು. ಸಾಂಪ್ರದಾಯಿಕ ರಾಗಗಳೊಂದಿಗೆ ಹೊಸ ರಾಗಗಳನ್ನು ತಂದು ಪೌರಾಣಿಕ ಹಾಗೂ ಸಾಮಾಜಿಕ ಪ್ರಸಂಗಗಳನ್ನು ಚೆನ್ನಾಗಿ ನಿರ್ವಹಿಸುತ್ತಿದ್ದ ಸುಬ್ರಹ್ಮಣ್ಯ ಧಾರೇಶ್ವರರು, ಕಾಳಿಂಗ ನಾವಡರರ ನಂತರ ಯಕ್ಷಗಾನ ರಂಗದಲ್ಲಿ ತನ್ನ ಇಂಪಾದ ಕಂಠದಿಂದ ಜನಪ್ರಿಯರಾದವರು.

    ಮೂಲತಃ ಎಲೆಕ್ಟ್ರಿಕಲ್ ಅಂಗಡಿ ಮಾಡಿಕೊಂಡಿದ್ದ ಸುಬ್ರಹ್ಮಣ್ಯ ಧಾರೇಶ್ವರ ಕೋಟದಲ್ಲಿ ಯಕ್ಷಗಾನ ಕೇಂದ್ರಕ್ಕೆ ಸೇರಿ ಅಲ್ಲಿ ಭಾಗವತಿಕೆಯ ಮಟ್ಟುಗಳನ್ನು ಕಲಿತರು. ಉಪ್ಪೂರರಿಂದ ಭಾಗವತಿಕೆಯ ಎಲ್ಲ ಪಟ್ಟುಗಳನ್ನು ಕಲಿತರು. ಆರಂಭದಲ್ಲಿ ಎಲೆಕ್ಟ್ರಿಶಿಯನ್ ಆಗಿ ಅಮೃತೇಶ್ವರಿ ಮೇಳಕ್ಕೆ ಸೇರಿದರು. ಈ ಸಂದರ್ಭ ಗುರುಗಳಾದ ಉಪ್ಪೂರರ ಒತ್ತಾಸೆಯಿಂದ ಭಾಗವತಿಕೆ ಮಾಡಲು ಆರಂಭಿಸಿದರು. ಪೀಠಿಕೆ ಸ್ತ್ರೀವೇಷದವರೆಗೆ ಪದ್ಯ ಹೇಳಿ, ಎಲೆಕ್ಟ್ರಿಶಿಯನ್ ಆಗಿ, ಹಗಲು ಮೈಕ್ ಜಾಹೀರಾತು ನೀಡುವ ಕೆಲಸವನ್ನು ಮಾಡುತ್ತಿದ್ದ ಧಾರೇಶ್ವರರು, ಬಳಿಕ ಭಾಗವತಿಕೆಯಲ್ಲೇ ತೊಡಗಿಸಿಕೊಂಡು ಜನಪ್ರಿಯರಾದರು. ಪೆರ್ಡೂರು ಮೇಳದಲ್ಲಿ ಸುಮಾರು 26ಕ್ಕೂ ಅಧಿಕ ವರ್ಷಗಳ ತಿರುಗಾಟ ಸಹಿತ ಧಾರೇಶ್ವರ ಚಾರಿಟೇಬಲ್ ಟ್ರಸ್ಟ್ ಮೂಲಕ ಯಕ್ಷಗಾನ ಸೇವೆ ಮಾಡಿದ್ದಾರೆ.

    ಸುಮಾರು 300ಕ್ಕೂ ಅಧಿಕ ಪೌರಾಣಿಕ, ಐತಿಹಾಸಿಕ, ಸಾಮಾಜಿಕ ಪ್ರಸಂಗಗಳನ್ನು ನಿರ್ದೇಶಿಸಿದ ಕೀರ್ತಿ ಧಾರೇಶ್ವರ ಅವರಿಗಿದೆ. ಪುರಂದರದಾಸ, ಕನಕದಾಸ, ಬಸವಣ್ಣ, ಚೆನ್ನಮಲ್ಲಿಕಾರ್ಜುನರ ಕೀರ್ತನೆಗಳನ್ನೂ ಅವರು ಹಾಡಿದ್ದಾರೆ. ಕುವೆಂಪು, ಬೇಂದ್ರೆಯವರ ಹಾಡುಗಳೂ ಯಕ್ಷಗಾನದ ಹಾಡುಗಳಾಗಿದ್ದು ಧಾರೇಶ್ವರರ ಕಂಠದಲ್ಲಿ. ಅಮೃತ ವರ್ಷಿಣಿ, ಸಿಂಧೂರ ಭಾಗ್ಯ, ರಕ್ತ ತಿಲಕ, ಶೂದ್ರ ತಪಸ್ವಿನಿ, ಚಾರು ಚಂದ್ರಿಕೆ, ಗಗನ ಗಾಮಿನಿ, ವಸಂತ ಸೇನೆ ನಿರ್ದೇಶಿಸಿದ ಎಲ್ಲ ಪ್ರಸಂಗಗಳೂ ಜನಮಾನಸದಲ್ಲಿ‌ ಅಚ್ಚಳಿಯದೇ ಉಳಿದಿವೆ.