ಕುಮಟಾ : ಬೆಳಕಿನ ಹಬ್ಬ ದೀಪಾವಳಿ ಹಲವು ವೈಶಿಷ್ಟ್ಯಗಳನ್ನು ಕಟ್ಟಿಕೊಡುತ್ತದೆ. ಮೂರು ದಿನಗಳ ಕಾಲ ಅತ್ಯಂತ ವಿಜ್ರಂಬಣೆಯಿಂದ ನಡೆದ ದೀಪಾವಳಿ ಹಬ್ಬವು ಸಂಪನ್ನವಾಗಿದ್ದು, ಬಲಿಂದ್ರನನ್ನು ಕಳುಹಿಸಿ ಕೊಡುವುದರ ಮೂಲಕ ಹಬ್ಬಕ್ಕೆ ಮಂಗಲ ಹಾಡಲಾಯಿತು.
ಇನ್ನು ಭಾರತೀಯ ಸಂಸ್ಕೃತಿಯಲ್ಲಿ ಗೋವಿಗೆ ತುಂಬಾ ಮಹತ್ವವಿದ್ದು. ಹಬ್ಬದಲ್ಲಿ ಮರೆಯದೇ ಗೋವನ್ನು ಪೂಜಿಸುವ ಸಂಪ್ರದಾಯವಿದೆ. ಅಂತೆಯೇ ಹಬ್ಬದ ಪಾಡ್ಯದ ದಿನದಂದು ಬಹು ವಿಶೇಷವಾಗಿ ಗೋ ಪೂಜೆ ಸಂಪನ್ನಗೊಂಡಿತು. ಗೋವುಗಳಿಗೆ ವಿಶೇಷ ಅಲಂಕಾರ ಮಾಡಿ, ಪೂಜಿಸಿ, ದನಗಳನ್ನು ಬೆಚ್ಚಿಸುವ ಪಾರಂಪರಿಕ ಆಚರಣೆಗಳೂ ಬಹು ವಿಶೇಷವಾಗಿ ನಡೆದವು.
ಸಾಂಪ್ರದಾಯಿಕ ಪೂಜೆ ಪುನಸ್ಕಾರಗಳ ಜೊತೆಯಲ್ಲಿ ಹಬ್ಬದ ಅಡುಗೆ ಮಾಡಿ ಸಂಭ್ರಮಿಸುವ ಜೊತೆಗೆ, ಯುವಕರು ಹಾಗೂ ಹುಡುಗರು ಪಟಾಕಿಗಳನ್ನು ಸಿಡಿಸಿ ಸಂಭ್ರಮಿಸಿದರು.
ಒಟ್ಟಿನಲ್ಲಿ ದೀಪಾವಳಿಯ ಹಬ್ಬವು ಬಹು ವಿಶೇಷವಾಗಿ ನಡೆದಿದ್ದು, ತಾಲೂಕಿನಲ್ಲಿ ಅತ್ಯಂತ ವಿಜ್ರಂಭಣೆಯಿಂದ ಮೂರು ದಿನಗಳ ಕಾಲ ಹಬ್ಬ ಆಚರಿಸಲ್ಪಟ್ಟಿತು. ಊರಿನ ಹಾಗೂ ಪರ ಊರಿನ ಅನೇಕರು ವಿವಿಧ ಸಂಪ್ರದಾಯಗಳು, ಪೂಜೆ ಪುನಸ್ಕಾರದಲ್ಲಿ ಭಾಗವಹಿಸಿ ಹಬ್ಬದೂಟವನ್ನು ಸವಿದು ಸಂತಸ ಪಟ್ಟರು.
ಸಿದ್ದಾಪುರ: ಸಿದ್ದಾಪುರ ಸಾಗರ ರಾಜ್ಯ ಹೆದ್ದಾರಿಯ ಅರೆಂದೂರು ಸಮೀಪ ಸಾರಿಗೆ ಬಸ್ ಹಾಗೂ ಪಿಕ್ಅಪ್ ವಾಹನದ ನಡುವೆ ಡಿಕ್ಕಿ ಸಂಭವಿಸಿ ಪಿಕ್ಅಪ್ ವಾಹನ ಚಾಲಕನಿಗೆ ತೀವ್ರತರನಾದ ಗಾಯಗಳಾದ ಘಟನೆ ಸಂಭವಿಸಿದೆ. ಶಿರಸಿಯಿಂದ ಸಾಗರಕ್ಕೆ ಹೋಗುತ್ತಿದ್ದ ಸಾರಿಗೆ ಬಸ್ ಹಾಗೂ ಸಾಗರ ಕಡೆಯಿಂದ ಸಿದ್ದಾಪುರ ಕಡೆಗೆ ಪಿಕ್ಅಪ್ ವಾಹನ ಬರುತ್ತಿತ್ತು ಎನ್ನಲಾಗಿದ್ದು, ಗಾಯಾಳುಗಳನ್ನು ಸಾಗರ ಆಸ್ಪತ್ರೆಗೆ ರವಾನಿಸಲಾಗಿದೆ. ಪಿಕ್ಅಪ್ ವಾಹನ ಸಾಗರದ್ದೆಂದು ಹೇಳಲಾಗಿದ್ದು, ಪೋಲಿಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕುಮಟಾ : ಮಂಗಳೂರು ಹಾಗೂ ಕರ್ನಾಟಕದ ಪ್ರಮುಖ ನಗರಗಳಲ್ಲಿ ಈಗಾಗಲೇ ಅತ್ಯುತ್ತಮ ಶಿಕ್ಷಣ ನೀಡುತ್ತಿರುವ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ತರಬೇತಿ ಪಡೆಯಲು ವಿದ್ಯಾರ್ಥಿಗಳಿಗೆ ಮೊದಲ ಆಯ್ಕೆ ಎಂಬಂತೆ ಗುರುತಿಸಿಕೊಂಡಿರುವ ವಿಧಾತ್ರಿ ಅಕಾಡೆಮಿ ಕಳೆದ ಐದು ವರ್ಷಗಳಿಂದ ಕುಮಟಾದ ಕೊಂಕಣ ಎಜುಕೇಶನ್ ಟ್ರಸ್ಟ್ ನ ಬಿ.ಕೆ ಭಂಡಾರ್ಕರ್ಸ ‘ಸರಸ್ವತಿ ಪಿ.ಯು ಕಾಲೇಜಿನ’ ಮೂಲಕ ಉತ್ತರ ಕನ್ನಡದಲ್ಲಿಯೇ ಹೊಸ ಸಂಚಲನ ಮೂಡಿಸುವ ಜೊತೆಗೆ, ನಿರಂತರ ಸಾಧನೆಯ ಮೂಲಕವೂ ಹೆಸರುಗಳಿಸಿದೆ. ಹೀಗಾಗಿ ಕೊಂಕಣ ಎಜ್ಯುಕೇಶನ್ ಹಾಗೂ ವಿಧಾತ್ರಿ ಅಕಾಡೆಮಿ ಸಹಭಾಗಿತ್ವದಲ್ಲಿ ನಿರಂತರ ಸಾಧನೆಯ ಮೂಲಕ, ವಿದ್ಯಾಗಿರಿಯನ್ನು ನಿಜಾರ್ಥದಲ್ಲಿ ಜ್ಞಾನ ಶಿಖರವಾಗಿಸಿದೆ “ಸರಸ್ವತಿ ಪಿ.ಯು ಕಾಲೇಜು”.
KCET, JEE (Mains), NEET, NATA, NDA, AGRI ಮುಂತಾದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಕಳೆದ ನಾಲ್ಕೈದು ವರ್ಷದಿಂದ, ಕರೋನಾ ಸಂಕಷ್ಟದ ಸಮಯದಲ್ಲಿಯೂ ಆನ್ಲೈನ್ ಮೂಲಕ ಅತ್ಯುತ್ತಮ ಮಾರ್ಗದರ್ಶನ ನೀಡಿ ಸೈ ಎನಿಸಿಕೊಂಡಿರುವ ಸಂಸ್ಥೆ ಇದಾಗಿದೆ. ವಿದ್ಯಾರ್ಥಿಗಳ ಜೊತೆಗೆ ನಿರಂತರ ಸಂಪರ್ಕದಲ್ಲಿದ್ದು ಅಗತ್ಯ ಮಾರ್ಗದರ್ಶನ ಮಾಡುತ್ತ, ಅವರಿಗೆ ಅಗತ್ಯವಾದ ಶೈಕ್ಷಣಿಕ ಪರಿಕರ ಹಾಗೂ ಪ್ರಾಯೋಗಿಕ ತರಗತಿ ಸೌಲಭ್ಯಗಳನ್ನು ಒದಗಿಸಿಕೊಡುತ್ತಿದೆ.
ಕಳೆದ ನಾಲ್ಕು ವರ್ಷಗಳಿಂದ 100%ದ ಸಾಧನೆ ಮಾಡುತ್ತಿರುವ ಸಂಸ್ಥೆ ಇದಾಗಿದೆ. ೨೦೨೩-೨೪ನೇ ಸಾಲಿನ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳಿಸಿ ರಾಜ್ಯ ಮಟ್ಟದಲ್ಲಿ ನಾಲ್ಕು ಸ್ಥಾನವನ್ನು ಪಡೆದು ಸಂಸ್ಥೆಯ ಹಿರಿಮೆಯನ್ನು ಹೆಚ್ಚಿಸಿದ್ದಾರೆ. ವಿಜ್ಞಾನ ವಿಭಾಗದಲ್ಲಿ ಶ್ರಾವ್ಯ ಭಟ್ಟ 594 ಅಂಕಗಳಿಸಿ ರಾಜ್ಯ ಮಟ್ಟದಲ್ಲಿ 5 ನೇ ಸ್ಥಾನ, ಜಿಲ್ಲೆಗೆ ಮೊದಲ ಸ್ಥಾನ ಪಡೆದು ಕಾಲೇಜಿಗೆ ಪ್ರಥಮಳಾಗಿ ಹೊರಹೊಮ್ಮಿದ್ದಾಳೆ. ತಿಲಕ ಕುಮಟಾ ಹಾಗೂ ಶ್ರೀಕೃಷ್ಣ ಶಾನಭಾಗ 589 ಅಂಕಗಳಿಸಿ ರಾಜ್ಯ ಮಟ್ಟದಲ್ಲಿ 10 ನೇ ಸ್ಥಾನ ಗಳಿಸುವುದರೊಂದಿಗೆ ಕಾಲೇಜಿಗೆ ದ್ವಿತೀಯ ಸ್ಥಾನ ಪಡೆದಿದ್ದಾರೆ. ರಾಘವೇಂದ್ರ ಎನ್. ಹಾಗೂ ಪೂರ್ಣ ಶೇಟ್ 584 ಅಂಕಗಳಿಸಿ ಕಾಲೇಜಿಗೆ ತೃತೀಯ ಸ್ಥಾನ ಪಡೆದಿದ್ದಾರೆ. ಒಟ್ಟು 193 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು ಅದರಲ್ಲಿ 139 ವಿದ್ಯಾರ್ಥಿಗಳು ಅತ್ಯುತ್ತಮ ಶ್ರೇಣಿಯಲ್ಲಿ ಹಾಗೂ ಉಳಿದ ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ತೇರ್ಗಡೆ ಹೊಂದಿರುವದು ಸಂಸ್ಥೆಯ ಸಾಧನೆಗೆ ಹಿಡಿದ ಕೈಗನ್ನಡಿಯಂತಿದೆ.
ಅತ್ಯುತ್ತಮ ಪ್ರಾಧ್ಯಾಪಕ ವೃಂದ :
ಮಂಗಳೂರು-ಬೆಂಗಳೂರು ಹುಬ್ಬಳ್ಳಿ-ಧಾರವಾಡಗಳಲ್ಲಿ ಸರಿ ಸುಮಾರು 10ರಿಂದ 20 ವರ್ಷ ಸೇವೆ ಸಲ್ಲಿಸಿ ಅನುಭವ ಹೊಂದಿರುವ ಪ್ರಾಧ್ಯಾಪಕರು ಸಂಸ್ಥೆಯಲ್ಲಿ ವಿದ್ಯಾರ್ಥಿಗಳಿಗೆ ತಮ್ಮ ಅನುಭವದ ಧಾರೆ ಎರೆಯುತ್ತಿದ್ದಾರೆ. ಪ್ರಾಯೋಗಿಕ ತರಗತಿಗಳು ಹಾಗೂ ವಿದ್ಯಾರ್ಥಿಗಳಿಗೆ ಅಗತ್ಯವಾದ ಶಿಕ್ಷಣದ ಜೊತೆಗೆ ಸ್ಪರ್ಧಾತ್ಮಕ ಜಗತ್ತಿಗೆ ವಿದ್ಯಾರ್ಥಿಗಳನ್ನು ರೂಪಿಸಲು ತಮ್ಮ ಪರಿಪೂರ್ಣ ಶ್ರಮ ವಹಿಸುತ್ತಿರುವುದು ಶ್ಲಾಘನೀಯ ಎಂದು ಪಾಲಕರು ಈಗಾಗಲೇ ಮೆಚ್ಚುಗೆ ಸೂಚಿಸಿರುವುದನ್ನು ಇಲ್ಲಿ ಸ್ಮರಿಸಬಹುದು.
ಪ್ರತೀ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಗಮನ :
ಪ್ರತಿ ವಿದ್ಯಾರ್ಥಿಗಳಿಗೆ ಅವರ ಶಿಕ್ಷಣಕ್ಕೆ ಅನುಕೂಲವಾಗುವ ದೃಷ್ಟಿಯಿಂದ ಉಪನ್ಯಾಸಕರು ಪ್ರತ್ಯೇಕ ಗಮನ ನೀಡುತ್ತಿದ್ದು ಇದರ ಜೊತೆಗೆ ಅತ್ಯುತ್ತಮವಾದ ಯೋಜನೆಗಳೊಂದಿಗೆ ರಿವಿಸನ್ ಟೆಸ್ಟ್ ಗಳು ನಡೆಯಲಿದೆ.
ಸುಸಜ್ಜಿತವಾದ ಲ್ಯಾಬೋರೇಟರಿ :
ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ತರಗತಿಗಳನ್ನು ನಡೆಸಲು ಸುಸಜ್ಜಿತವಾದ ಲ್ಯಾಬೋರೇಟರಿ ಗಳನ್ನು ಸಂಸ್ಥೆ ಒಳಗೊಂಡಿದ್ದು ಯಾವೆಲ್ಲಾ ಅವಶ್ಯಕತೆಗಳ ಅಗತ್ಯತೆ ಇದೆಯೋ ಅವುಗಳನ್ನು ನಿರಂತರವಾಗಿ ವಿದ್ಯಾರ್ಥಿಗಳಿಗೆ ಪೂರೈಸುವಲ್ಲಿ ದಿಟ್ಟ ಹೆಜ್ಜೆ ಇಟ್ಟಿದೆ. ವಿದ್ಯಾರ್ಥಿಗಳನ್ನು ಕ್ರಿಯಾತ್ಮಕವಾಗಿ ರೂಪಿಸುವ ದೃಷ್ಟಿಯಿಂದ ಸ್ಟೇಟ್ ಆಫ್ ಆರ್ಟ್ ಲ್ಯಾಬೋರೇಟರಿ ಗಳು ಬಳಕೆಯಲ್ಲಿದೆ.
ಬಸ್ ಹಾಗೂ ಊಟದ ವ್ಯವಸ್ಥೆ :
27 ವರ್ಷಗಳಿಂದ ಶಿಕ್ಷಣದಲ್ಲಿ ವೈವಿದ್ಯತೆಯ ಮೂಲಕ ಹೆಸರುಗಳಿಸಿರುವ ಕೊಂಕಣ ಎಜ್ಯುಕೇಶನ್ ಟ್ರಸ್ಟ್ ವಿದ್ಯಾರ್ಥಿಗಳಿಗೆ ಗೋಕರ್ಣ, ಹೊನ್ನಾವರ, ಅಂಕೋಲಾ ದಂತಹ ಪಟ್ಟಣದ ಪ್ರದೇಶಗಳಿಗೆ ಹಾಗೂ ಬಾಡ, ಚಂದಾವರ, ನವಿಲಗೋಣನಂತಹ ಹಳ್ಳಿಗಳಿಗೆ ಸುಸಜ್ಜಿತ ಶಾಲಾ ಬಸ್ ವ್ಯವಸ್ಥೆ ಕಲ್ಪಿಸಿದೆ. ತನ್ನ ಎಲ್ಲಾ ವಿದ್ಯಾರ್ಥಿಗಳಿಗೆ ಶುದ್ಧ, ಹಾಗೂ ಸ್ವಾದಿಷ್ಟ ಮಧ್ಯಾಹ್ನದ ಊಟದ ವ್ಯವಸ್ಥೆ ಕಲ್ಪಿಸಿರುವ ಮೂಲಕ ಜನ ಮೆಚ್ಚುಗೆ ಗಳಿಸಿದೆ. ವಿಶಾಲ ಕ್ರೀಡಾಂಗಣ, ಸ್ಮಾರ್ಟ ಕ್ಲಾಸ್, ಕ್ರೀಡೋಪಕರಣಗಳು, ವಿಜ್ಞಾನ ಲ್ಯಾಬ್‍ಗಳನ್ನು ಒದಗಿಸಿರುವ ಕೊಂಕಣ ಎಜ್ಯುಕೇಶನ್ ವಿಧಾತ್ರಿ ಅಕಾಡೆಮಿ ಜೊತೆಗೆ ಸೇರಿ ಅತ್ಯುನ್ನತ ಕಾಲೇಜು ಶಿಕ್ಷಣ ನೀಡುತ್ತಿದೆ.
ಹಾಸ್ಟೇಲ್ ವ್ಯವಸ್ಥೆ :
ಕುಮಟಾ ಹಾಗೂ ಸುತ್ತಮುತ್ತಲ ವಿದ್ಯಾರ್ಥಿಗಳನ್ನು ಹೊರತುಪಡಿಸಿ ಹೊರ ಜಿಲ್ಲೆ ಹಾಗೂ ಬೇರೆ ಬೇರೆ ಕಡೆಗಳಿಂದ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ವ್ಯವಸ್ಥೆ ಕಲ್ಪಿಸಲಾಗಿದ್ದು, ಗಂಡುಮಕ್ಕಳಿಗೆ ಹಾಗೂ ಹೆಣ್ಣು ಮಕ್ಕಳಿಗೆ ಪ್ರತ್ಯೇಕ ಹಾಸ್ಟೆಲ್ ವ್ಯವಸ್ಥೆ ಹಾಗೂ ಈ ವರ್ಷದಿಂದ ಶಾಖಾಹಾರಿಗಳಿಗೆ ಪ್ರತ್ಯೇಕ ಊಟ, ತಿಂಡಿ, ವಸತಿ ವ್ಯವಸ್ಥೆಯನ್ನು ಕಲ್ಪಿಸಿಕೊಡಲಾಗಿದೆ.
ನಿರಂತರ ಪಾಲಕರ ಸಭೆ :
ವಿದ್ಯಾರ್ಥಿಗಳ ಶೈಕ್ಷಣಿಕ ದೃಷ್ಟಿಯಿಂದ ಪಾಲಕರ ಜೊತೆಗೆ ನಿರಂತರ ಸಂವಹನವನ್ನು ಕಾಲೇಜು ನಡೆಸಲಿದ್ದು, ನಿರಂತರವಾಗಿ ಪಾಲಕರ ಸಭೆ ಮಾಹಿತಿ ವಿನಿಮಯ ಕಾರ್ಯಕ್ರಮ ಹಾಗೂ ವಿವಿಧ ನುರಿತ ಉಪನ್ಯಾಸಕರಿಂದ ಉಪನ್ಯಾಸ ಕಾರ್ಯಕ್ರಮ ಇವುಗಳನ್ನು ಏರ್ಪಡಿಸುವ ಮೂಲಕ ವಿದ್ಯಾರ್ಥಿಗಳ ಹೆಜ್ಜೆ ಹೆಜ್ಜೆಯನ್ನೂ ಗಮನಿಸಿ ಅವರ ಬೆಳವಣಿಗೆಗೆ ಪೂರಕ ವಾತಾವರಣ ನಿರ್ಮಿಸಿದೆ.
ಶೈಕ್ಷಣಿಕ ಪರಿಕರಗಳು :
ವಿದ್ಯಾರ್ಥಿಗಳ ಶೈಕ್ಷಣಿಕ ದೃಷ್ಟಿಯಿಂದ ಅಗತ್ಯವಾದ ಶೈಕ್ಷಣಿಕ ಪರಿಕರಗಳು ಪಠ್ಯಪುಸ್ತಕಗಳು ಹಾಗೂ ಬೇರೆ ಬೇರೆ ಕಡೆಗಳಲ್ಲಿ ಬಳಕೆಯಾಗುತ್ತಿರುವ ಜ್ಞಾನದ ಅಭಿವೃದ್ಧಿಯ ದೃಷ್ಟಿಯಿಂದ ಉಪಯುಕ್ತ ಪರಿಕರಗಳನ್ನು ವಿದ್ಯಾರ್ಥಿಗಳಿಗೆ ಒದಗಿಸುತ್ತಿದೆ.
ಹೆಚ್ಚಿನ ಮಾಹಿತಿಗಾಗಿ ಹಾಗೂ ಹೆಸರು ನೋಂದಾವಣೆ, ದಾಖಲಾತಿ ಪ್ರಕ್ರಿಯೆಗಳಿಗಾಗಿ www.vidhatriacademy.org ಗೆ ಭೇಟಿ ನೀಡಿ ಅಥವಾ 9972663855 / 9972664155 ಸಂಪರ್ಕಿಸಿ.
ಕುಮಟಾ : ಜಿಲ್ಲೆಯ ಹಲವು ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗುತ್ತಿದೆ. ಜಿಲ್ಲೆಯ ಕುಮಟಾ, ಅಂಕೋಲಾ, ಹೊನ್ನಾವರ ಸೇರಿದಂತೆ ಕರಾವಳಿಯ ತಾಲೂಕಿನ ನಗರ ಸೇರಿದಂತೆ ಗ್ರಾಮೀಣ ಭಾಗದಲ್ಲಿ ಮಳೆ ಉಂಟಾಗಿದೆ. ಈ ಮೂಲಕ ಸುಡು ಬಿಸಿಲಿನಿಂದ ಪರಿತಪಿಸುತ್ತಿದ್ದ ಉತ್ತರಕನ್ನಡ ಜಿಲ್ಲೆಯ ಕರಾವಳಿಯಲ್ಲಿ ಮಳೆರಾಯ ತಂಪೆರೆದಿದ್ದಾನೆ.
ಕಳೆದ ಎರಡು ದಿನಗಳಿಂದ ಭಾರೀ ಮೊಡಕವಿದ ವಾತಾವಣ ಇತ್ತು. ವಿಪರೀತವಾದ ಬಿಸಿಲಿನ ಧಗೆಗೆ ಕಂಗೆಟ್ಟಿದ್ದ ಜನತೆಗೆ ತಂಪಾಗಿಸಿದ ವರುಣ ತಂಪೆರೆದಿದೆ. ಕಳೆದೆರಡು ದಿನಗಳಿಂದ ಘಟ್ಟದ ಮೇಲಿನ ತಾಲ್ಲೂಕುಗಳಲ್ಲಿ ಅಬ್ಬರಿಸಿತ್ತು. ಇಂದು ಬೆಳ್ಳಂಬೆಳಿಗ್ಗೆ ಕುಮಟಾ, ಅಂಕೋಲಾ ಭಾಗದಲ್ಲಿ ಮಳೆ ಸುರಿಯುತ್ತಿದ್ದು ತಂಪೆರೆದಿದೆ.
ಇನ್ನೂ ಜಿಲ್ಲೆಯಲ್ಲಿ ಎಪ್ರಿಲ್ 22ರ ವರೆಗೆ ಮಳೆ ಸುರಿಯುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಶಿರಸಿ, ಸಿದ್ದಾಪುರ, ಮುಂಡಗೋಡ, ಹಳಿಯಾಳ ಭಾಗದಲ್ಲಿ ಕಳೆದೆರಡು ದಿನಗಳಿಂದ ಭಾರೀ ಮಳೆ ಉಂಟಾಗುತ್ತಿದೆ. ಇನ್ನೂ ಎರಡು ದಿನ ಜಿಲ್ಲೆಯಲ್ಲಿ ಭಾರೀ ಮಳೆ ಸುರಿಯುವ ಬಗ್ಗೆ ಇಲಾಖೆ ಮಾಹಿತಿ ನೀಡಿದೆ.
ಶಿರಸಿ : ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ಶಿವರಾಮ ಹೆಬ್ಬಾರ ಬೆಂಬಲಿಗರು ಕಾಂಗ್ರೆಸ್ ಪಕ್ಷ ಸೇರುವುದಕ್ಕೆ ಸಿದ್ಧತೆ ನಡೆಸಿದ್ದು, ಯುಗಾದಿ ನಂತರ ಕಾಂಗ್ರೆಸ್ಸಿಗೆ ಸೇರುವ ಸಾಧ್ಯತೆ ದಟ್ಟವಾಗಿದೆ. ಈ ಬಗ್ಗೆ ಸ್ವತಃ ಶಿವರಾಮ ಹೆಬ್ಬಾರ ಮಂಗಳವಾರ ನಗರದಲ್ಲಿ ಬನವಾಸಿ ಹೋಬಳಿಯ ಎಲ್ಲ ಗ್ರಾಮ ಪಂಚಾಯತ ವ್ಯಾಪ್ತಿಗಳ ಬೆಂಬಲಿಗರ ಸಭೆ ನಡೆಸಿರುವುದು ಅವರು ಕಾಂಗ್ರೆಸ್ಸಿಗೆ ಸೇರುತ್ತಾರೆ ಎಂಬುದಕ್ಕೆ ಪುಷ್ಟಿ ನೀಡುವಂತಿದೆ. ಪ್ರತಿ ಗ್ರಾಮ ಪಂಚಾಯತ ವ್ಯಾಪ್ತಿಯ ತಮ್ಮ ಪ್ರಮುಖ ಬೆಂಬಲಿಗರ ಸಭೆ ಪ್ರತ್ಯೇಕವಾಗಿನಡೆಸಿದ್ದು, ಕಾಂಗ್ರೆಸ್ ಸೇರ್ಪಡೆ ನಿಟ್ಟಿನಲ್ಲಿ ಸಲಹೆ ಸೂಚನೆ ಪಡೆಯಲಾಗಿದೆ ಎನ್ನಲಾಗಿದೆ.
ಶಿರಸಿ ತಾಲೂಕಿನ ಬನವಾಸಿ ಹೋಬಳಿ ಸುಮಾರು ೧೦ ಗ್ರಾಮ ಪಂಚಾಯತಗಳು ಯಲ್ಲಾಪುರ ವಿಧಾನಸಭಾ ಕ್ಷೇತ್ರಕ್ಕೆ ಸೇರುತ್ತವೆ. ಪ್ರತಿ ಗ್ರಾಪಂ ವ್ಯಾಪ್ತಿಯಿಂದ ಸುಮಾರು ೩೦ಕ್ಕೂ ಹೆಚ್ಚು ಕಾರ್ಯಕರ್ತರು ಸಭೆಯಲ್ಲಿ ಪಾಲ್ಗೊಂಡಿದ್ದಾರೆ ಎನ್ನಲಾಗಿದ್ದು, ಐದು ತಾಸುಗಳ ಕಾಲ ಸಭೆ ನಡೆದಿದೆ. ಬೆಂಬಲಿಗರ ಸಭೆಯಲ್ಲಿ ಪುತ್ರ ವಿವೇಕ ಹೆಬ್ಬಾರ ಸಹ ಹಾಜರಿದ್ದರು ಎಂದು ಗೊತ್ತಾಗಿದೆ.
ಬಿಜೆಪಿಯಿಂದ ಅಂತರ ಕಾಯ್ದುಕೊಂಡಿರುವ ಶಾಸಕ ಶಿವರಾಮ ಹೆಬ್ಬಾರ ಬೆಂಬಲಿಗರು ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದರೂ ಈಗ ಸೇರ್ಪಡೆಯಾಗುವುದಿಲ್ಲ ಎಂದು ಗೊತ್ತಾಗಿದೆ. ಈ ಬಗ್ಗೆ ಬೆಂಬಲಿಗರಿಗೂ ಈ ಬಗ್ಗೆ ವಿಷಯ ಮನವರಿಕೆ ಮಾಡಲಾಗಿದೆ. ಅವರು ಈ ಸಂದರ್ಭದಲ್ಲಿ ಕಾಂಗ್ರೆಸ್ ಸೇರುವುದರಿಂದ ಅವರಿಗೆ ತಾಂತ್ರಿಕ ತೊಂದರೆ ಆಗುವ ಸಾಧ್ಯತೆ ಇರುವುದರಿಂದ ಸದ್ಯ ಸೇರ್ಪಡೆಯಿಲ್ಲ ಎಂದು ಹೇಳಲಾಗಿದೆ. ಹೀಗಾಗಿ ತಾವು ನಿರ್ಧಾರ ತೆಗೆದುಕೊಳ್ಳುವ ಮೊದಲು ಲೋಕಸಭಾ ಚುನಾವಣೆ ವೇಳೆ ತಮ್ಮ ಬೆಂಬಲಿಗರನ್ನು ಮೊದಲ ಹಂತದಲ್ಲಿ ಕಾಂಗ್ರೆಸ್ಸಿಗೆ ಸೇರ್ಪಡೆ ಮಾಡಿಸಲು ತಯಾರಿ ನಡೆಸುತ್ತಿದ್ದು, ಅದರ ಪೂರ್ವಭಾವಿಯಾಗಿ ಈ ಸಭೆ ನಡೆದಿದೆ ಎನ್ನಲಾಗಿದೆ.
ಸಿದ್ದಾಪುರ ತಾಲೂಕಿನ ಮುಗದೂರು ಗ್ರಾಮದ ದಿ|| ಶಂಕರನಾರಾಯಣ ಭಟ್ಟ ಹಾಗೂ ಶ್ರೀಮತಿ ಪ್ರಭಾ ಶಂಕರನಾರಾಯಣ ಭಟ್ಟ ಅವರ ಮಗಳು ಕುಮಾರಿ ಏಕತಾ ಶಂಕರನಾರಾಯಣ ಭಟ್ಟ, ದಿನಾಂಕ ೦೩ ಮಾರ್ಚ್ ೨೦೨೩ ರಂದು ಮೈಸೂರಿನಲ್ಲಿ ನಡೆದ ಮೈಸೂರು ವಿಶ್ವವಿದ್ಯಾನಿಲಯದ ೧೦೪ನೇ ವಾರ್ಷಿಕ ಘಟಿಕೋತ್ಸವದಲ್ಲಿ ಮನೋವಿಜ್ಞಾನದ ಎಂಎಸ್ಸಿಯಲ್ಲಿ ೫ ಚಿನ್ನದ ಪದಕಗಳನ್ನು ಮತ್ತು ೧ ನಗದು ಬಹುಮಾನವನ್ನು ಪಡೆದಿರುತ್ತಾಳೆ. ಇವಳು ಸುಬ್ರಾಯ ಉಪಾಧ್ಯಾಯ ಧಾರೇಶ್ವರ ಇವರ ಮೊಮ್ಮಗಳು.
ಸಿದ್ದಾಪುರ: ತಾಲೂಕಿನಲ್ಲಿ ಮಂಗನ ಕಾಯಿಲೆ ವ್ಯಾಪಿಸತೊಡಗಿದ್ದು ಮತ್ತೆರಡು ಜನರನ್ನು ಬಲಿ ತೆಗೆದುಕೊಂಡಿದೆ. ಸೋಮವಾರ ಕಲ್ಲೂರ ಹಾಗೂ ಹೆಗ್ಡೆಕೊಪ್ಪದದ ತಲಾ ಒಬ್ಬರು ಈ ಕಾಯಿಲೆಯಿಂದ ಮೃತಪಟ್ಟಿದ್ದಾರೆ. ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ಸೇರಿಸಲಾಗಿತ್ತು. ಅಲ್ಲಿಯೇ ರೋಗ ಉಲ್ಬಣಿಸಿ ಇಬ್ಬರೂ ವಯೋವೃದ್ಧ ಮೃತಪಟ್ಟಿದ್ದಾಗಿ ಆರೋಗ್ಯ ಇಲಾಖೆ ತಿಳಿಸಿದೆ.
ಈವರೆಗೆ ತಾಲೂಕಿನಲ್ಲಿ ಒಟ್ಟೂ ಐವತ್ತು ಜನರಲ್ಲಿ ಕೆಎಫ್‌ಡಿ ಕಂಡು ಬಂದಿದ್ದು ಸೋಮವಾರ ಮಣಿಪಾಲ ಆಸ್ಪತ್ರೆಯಲ್ಲಿ ಮೃತಪಟ್ಟ ಇಬ್ಬರನ್ನೂ ಸೇರಿ ಒಟ್ಟೂ ನಾಲ್ವರು ಮೃತಪಟ್ಟಂತಾಗಿದೆ. ಇದೀಗ ತಾಲೂಕಿನಲ್ಲಿ ಬಿರು ಬೇಸಿಗೆಯ ವಾತಾವರಣವಿದ್ದು ಮಂಗನ ಕಾಯಿಲೆ ಹರಡಲು ಇದು ಪೂರಕವೆನ್ನಲಾಗಿದೆ.ಆರೋಗ್ಯ ಇಲಾಖೆ ಈ ಕಾಯಿಲೆ ಕುರಿತು ಮತ್ತಷ್ಟು ಜಾಗೃತಿ ಮೂಡಿಸುವ ಅಗತ್ಯತೆ ಕಂಡುಬರುತ್ತಿರುವುದಾಗಿ ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ.
ಯಲ್ಲಾಪುರ : ಅನಾರೋಗ್ಯದ ಕಾರಣ ರಾಜ್ಯಸಭಾ ಚುನಾವಣೆಯಲ್ಲಿ ಮತದಾನ ಮಾಡಲು ಸಾಧ್ಯವಾಗಲಿಲ್ಲ ಎಂದು ಯಲ್ಲಾಪುರದ ಬಿಜೆಪಿ ಶಾಸಕ ಶಿವರಾಮ್ ಹೆಬ್ಬಾರ್ ಹೇಳಿದರು. ಇಂದು ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದಲ್ಲಿ ಮಾತನಾಡಿದ ಅವರು ಬೆಳಿಗ್ಗೆ ಸ್ವಲ್ಪ ಆರೋಗ್ಯ ಸರಿ ಇರಲಿಲ್ಲ ಹೋಗಬೇಕು ಅಂತಾ ಅನ್ಕೊಂಡಿದ್ದೆ ,ಡಾಕ್ಟರ್ ಸಲಹೆ ಮೇರೆಗೆ 6 ಗಂಟೆಗೆ ಹೊರ ಬರಬೇಕಾಯ್ತು, ಮತಕೇಂದ್ರಕ್ಕೆ ಹೋಗಿ ಬೇಕಾದ್ರೆ ಅಡ್ಡ ಮತದಾನ ಮಾಡಬಹುದಿತ್ತು,ಮತಕೇಂದ್ರಕ್ಕೆ ಹೋಗಿ ಮತದಾನ ಮಾಡದೇ ಬರಬಹುದಾಗಿತ್ತು.
ನಾನು ನಾಲ್ಕು ದಶಕದಿಂದ ರಾಜಕಾರಣದಲ್ಲಿ ಇದ್ದೇನೆ ನಾನು ಯಾರಿಗೂ ಹೆದರಿ ಮತದಾನಕ್ಕೆ ಹೋಗಿಲ್ಲ ಅನ್ನೊದು ತಪ್ಪು. ನಾನು ಯಾರಿಗೂ ವಾರ್ನಿಂಗ್ ಕೊಡುವ ಉದ್ದೇಶದಿಂದ ಮತದಾನ ಹೊಗದೆ ಇರುವುದು ತಪ್ಪು, ನನಗೆ ನನ್ನದೇ ಆದ ಅಸಮಧಾನ ಇರುವುದು ನಿಜ ಅದು ಜಿಲ್ಲಾಮಟ್ಟದಲ್ಲಿ ಅಸಮಧಾನ ಇರುವುದು.
ಕೇಂದ್ರ ಮತ್ತು ರಾಜ್ಯದ ಮುಖಂಡರ ಮೇಲೆ ಅಸಮಧಾನ ಇಲ್ಲ. ಸಮಸ್ಯೆ ಇರುವುದು ಜಿಲ್ಲಾ ಮಟ್ಟದ ನಾಯಕರಿಂದ ಮಾತ್ರ. ಯಾರು ಅಡ್ಡಗಾಲು ಹಾಕುತಿದ್ದಾರೆ ಎಂಬುದಕ್ಕೆ ಕಾಲವೇ ಉತ್ತರ ಕೊಡಲಿದೆ ಎಂದರು.
ಸಿದ್ದಾಪುರ: ತಾಲೂಕಿನಲ್ಲಿ ಕೆಎಫ್‌ಡಿ(ಮಂಗನ ಕಾಯಿಲೆ)ಗೆ ಈ ವರ್ಷ ಮೊದಲ ಬಲಿ ಆಗಿದ್ದು ಜನರಲ್ಲಿ ಆತಂಕ ಉಂಟಾಗಿದೆ. ತಾಲೂಕಿನ ಕೊರ್ಲಕೈ ಗ್ರಾಪಂ ವ್ಯಾಪ್ತಿಯ ಜಿಡ್ಡಿಯ 65 ವರ್ಷದ ಮಹಿಳೆಗೆ ಮಂಗನ ಕಾಯಿಲೆಯ ಚಿಕಿತ್ಸೆ ಫಲಕಾರಿ ಆಗದೆ ಸಾವನ್ನಪ್ಪಿದ್ದಾಳೆ. ರೋಗದ ಲಕ್ಷಣ ಕಂಡುಬಂದಾಗ ಪ್ರಾರಂಭದಲ್ಲಿ ಸಿದ್ದಾಪುರದ ಸರ್ಕಾರಿ ಆಸ್ಪತ್ರೆಯಲ್ಲಿ ನಂತರ ಶಿವಮೊಗ್ಗ, ಮಣಿಪಾಲ್‌ನಲ್ಲಿ ಹಾಗೂ ಆದರ್ಶ ಆಸ್ಪತ್ರೆ ಉಡುಪಿಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಳು.
ಮಂಗನ ಕಾಯಿಲೆಯ ಹಾಟ್ ಸ್ಪಾಟ್ ಆಗಿ ಸಿದ್ದಾಪುರ ತಾಲೂಕು ಕಾಣಿಸಿಕೊಂಡಿದ್ದು ತಾಲೂಕಿನಲ್ಲಿ ಇಲ್ಲಿಯವರೆಗೆ 43 ಜನರಲ್ಲಿ ಕೆಎಫ್‌ಡಿ ಕಾಣಿಸಿಕೊಂಡಿದ್ದು ಅವರಲ್ಲಿ ಒಬ್ಬಳು ಸಾವನ್ನಪ್ಪಿದ್ದರಿಂದ ಭಯದ ವಾತಾವರಣ ಉಂಟಾಗಿದೆ. ಮಂಗನ ಕಾಯಿಲೆ ಕುರಿತು ಆರೋಗ್ಯ ಇಲಾಖೆ ಮತ್ತಷ್ಟು ಜಾಗೃತಿವಹಿಸಿ ಜನರಲ್ಲಿ ಜಾಗೃತಿ ಮೂಡಿಸಬೇಕು. ಕೇವಲ ಕಾಟಾಚಾರದ ಸಭೆ ನಡೆಸಿದರೆ ಏನೂ ಪ್ರಯೋಜನ ಇಲ್ಲ. ರೋಗದ ಲಕ್ಷಣ ಕಂಡು ಬಂದ ವ್ಯಕ್ತಿಗೆ ಸೂಕ್ತ ಚಿಕಿತ್ಸೆ ನೀಡುವುದಕ್ಕೆ ಮುಂದಾಗಬೇಕು ಎಂದು ಜನರು ಆಗ್ರಹಿಸಿದ್ದಾರೆ.
ಜೋಯಿಡಾ : ಕರ್ತವ್ಯಕ್ಕೆ ತೆರಳುತ್ತಿದ್ದ ವೇಳೆ ಬೈಕೊಂಡು ಸ್ಕಿಡ್ ಆಗಿ ಬಿದ್ದು ಸವಾರರೋರ್ವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಜೋಯಿಡಾ ತಾಲೂಕಿನ ಅಣಶಿಯ ನಿಗುಂದಿಯಲ್ಲಿ ನಡೆದಿದೆ.
ಖಾನಾಪುರ ಮೂಲದ ವಿನಾಯಕ ಜಂಗ್ಲಿ ಎಂಬವರೇ ಮೃತಪಟ್ಟ ದುರ್ದೈವಿಯಾಗಿದ್ದು, ಇವರು ಕಾರವಾರ ಜೈಲಿನಲ್ಲಿ ವಾರ್ಡರ್ ಆಗಿ ಸೇವೆಯನ್ನು ಸಲ್ಲಿಸುತ್ತಿದ್ದರು. ತನ್ನೂರು ಖಾನಾಪುರಕ್ಕೆ ತನ್ನ ದ್ವಿಚಕ್ರ ವಾಹನದಲ್ಲಿ ಹೋಗಿ ಹಿಂದಿರುಗಿ ಬರುತ್ತಿದ್ದಾಗ ಅಣಶಿಯ ನಿಗುಂದಿ ಎಂಬಲ್ಲಿ ದ್ವಿಚಕ್ರ ವಾಹನ ಸ್ಕಿಡ್ ಆಗಿ ಬಿದ್ದ ಪರಿಣಾಮವಾಗಿ ಗಂಭೀರ ಗಾಯಗೊಂಡ ವಿನಾಯಕ್ ಸ್ಥಳದಲ್ಲಿ ಮೃತಪಟ್ಟಿದ್ದಾರೆ.