Satwadhara News

Category: Local News

  • ಮನೆಯಲ್ಲಿ ಬಿದ್ದು ಗಾಯಗೊಂಡಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಸಾವು.

    ಮನೆಯಲ್ಲಿ ಬಿದ್ದು ಗಾಯಗೊಂಡಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಸಾವು.

    ಶಿರಸಿ : ಇಲ್ಲಿನ ಗಾಂತನಗರದಲ್ಲಿರುವ ಬಾಡಿಗೆ ಮನೆಯಲ್ಲಿ ಬಿದ್ದು ಗಾಯಗೊಂಡಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ನಡೆದಿದೆ.

    ರುಕ್ಷಾಭಾಯಿ (68) ಮೃತ ಮಹಿಳೆ. ಈಕೆ ಮಾ.10 ರಂದು ಬೆಳಗಿನ ಜಾವ 2 ಗಂಟೆ ಸುಮಾರಿಗೆ ಬಾಡಿಗೆ ಮನೆಯಲ್ಲಿ ಮಲಗಿದ್ದಾಗ ಕಾಟ್ ನಿಂದ ನೆಲಕ್ಕೆ ಬಿದ್ದು ಗಂಭೀರ ಗಾಯಗೊಂಡಿದ್ದಳು. ಚಿಕಿತ್ಸೆಗಾಗಿ ಮಂಗಳೂರಿನ ಕೆ.ಎಸ್.ಹೆಗಡೆ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ದಾಖಲಿಸಿದಾಗ ಚಿಕಿತ್ಸೆ ಫಲಕಾರಿಯಾಗದೇ ಎ.11 ರಂದು ಸಂಜೆ ಮೃತಪಟ್ಟಿದ್ದಾಳೆ ಎಂದು ಪುತ್ರಿ ಗಾಯತ್ರಿ ಶಿರಸಿ ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

  • ನಾಳೆಯಿಂದ ಹೊಸಾಡದಲ್ಲಿ ಆಲೆಮನೆ ಹಬ್ಬ ಪ್ರಾರಂಭ : ಮಾ. ೧ ರಂದು ಗೋ ಸಂಧ್ಯಾ.

    ನಾಳೆಯಿಂದ ಹೊಸಾಡದಲ್ಲಿ ಆಲೆಮನೆ ಹಬ್ಬ ಪ್ರಾರಂಭ : ಮಾ. ೧ ರಂದು ಗೋ ಸಂಧ್ಯಾ.

    ಕುಮಟಾ : ತಾಲೂಕಿನ ಮೂರೂರಿನ ಹೊಸಾಡಿನಲ್ಲಿರುವ ಅಮೃತಧಾರಾ ಗೋ ಶಾಲೆಯ ಆವಾರದಲ್ಲಿ ಫೇ. ೨೭ ರಿಂದ ಮಾ.೨ ರವರೆಗೆ “ಆಲೆಮನೆ ಹಬ್ಬ” ಹಮ್ಮಿಕೊಳ್ಳಲಾಗಿದೆ ಎಂದು ಗೋಶಾಲೆ ಸಮಿತಿ ಹಾಗೂ ಗೋ ಸಂಧ್ಯಾ ಸಮಿತಿಯವರು ಜಂಟಿ ಪ್ರಕಟಣೆ ನೀಡಿದ್ದಾರೆ.

    ಈ ದಿನಗಳಲ್ಲಿ ಸಾಂಪ್ರದಾಯಿಕ ಆಲೆಮನೆ ಹಬ್ಬ, ಕಬ್ಬಿನ ಹಾಲಿನ ವಿವಿಧೋತ್ಪನ್ನ ಮಾರಾಟ ಗೋಗ್ರಾಸ ಸೇವೆ, ಗವ್ಯೋತ್ಪನ್ನ ಮಾರಾಟ, ಗೋ ಸಂತರ್ಪಣೆ, ವಾರ್ಷಿಕ ಸಭೆ, ಗೋಸಂಧ್ಯಾ, ಗೋಪಾಲ ಗೌರವ, ದೇಶೀ ಗೋತಳಿ ವೈಭವ, ಗೋ ಪೂಜೆ, ಗೋ ದಾನ, ಪ್ರತೀ ದಿನ ಕಾಮಧೇನು ಯಾಗ, ವಿಶೇಷವಾಗಿ ಈ ವರ್ಷ ಗೋಆರತಿ ಎಂಬ ವಿಶಿಷ್ಟ ಕಾರ್ಯಕ್ರಮ. ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ.

    ಫೇ. ೨೭ ರಂದು ಗೋ ಪ್ರೇಮಿ ಮಾತೆಯರ ದಿನ, 28 ರಂದು ಗೋ ಪ್ರೇಮಿ ಮಕ್ಕಳ ದಿನ, ಮಾ. 01 ರಂದು ಭಾರತೀಯ ಗೋ ಬ್ಯಾಂಕ್ ವಾಟ್ಸಾಪ್ ಬಳಗದ ದಿನ, 02 ರಂದು ಗೋ ಪ್ರೇಮಿ ಹಿರಿಯ ನಾಗರಿಕರ ದಿನ ನಡೆಯಲಿದ್ದು ಡಾ. ಡಿ.ಪಿ. ರಮೇಶ್ ಅವರ ಉಪಸ್ಥಿತಿಯಲ್ಲಿ ‘ವಿಶೇಷ ಪಂಚಗವ್ಯ ಚಿಕಿತ್ಸಾ ಶಿಬಿರ’ಮತ್ತು ಅವರಿಂದ ವಿಶೇಷ ಉಪನ್ಯಾಸ ಕಾರ್ಯಕ್ರಮ ನಡೆಯಲಿದೆ.

    ಗೋ ಸಂಧ್ಯಾ ಕಾರ್ಯಕ್ರಮ

    ಮಾ.೧ ರ ಶನಿವಾರ “ಗೋ ಸಂಧ್ಯಾ” ಕಾರ್ಯಕ್ರಮ ಆಯೋಜಿಸಲಾಗಿದೆ. ಕುಮಟಾ- ಹೊನ್ನಾವರ ವಿಧಾನಸಭಾ ಕ್ಷೇತ್ರದ ಶಾಸಕ ದಿನಕರ ಕೆ. ಶೆಟ್ಟಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಮ್. ನಾರಾಯಣ, ಹೊನ್ನಾವರ ಉಪ ಅರಣ್ಯ ಸಂರಕ್ಷಣಾಧಿಕಾರಿ ಯೋಗೀಶ್ ಸಿ.ಕೆ., ಮೈಸೂರು ಡೆವಲಪ್‌ಮೆಂಟ್ ಸೆಂಟರ್ ನ ಪ್ರಮುಖ ವಿನಾಯಕ ಪಿ. ಹೆಗಡೆ, ನಿವೃತ್ತ ವಿಜ್ಞಾನಿ ಪ್ರಭಾಕರ ಜೆ. ಭಟ್ಟ, ಜಿ.ಪಂ ಮಾಜಿ ಸದಸ್ಯ ಪ್ರದೀಪ ನಾಯಕ ಉಪಸ್ಥಿತಿಯಲ್ಲಿ ಸಭಾ ಕಾರ್ಯಕ್ರಮ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ, ಕಾಮಧೇನು ಪ್ರಸಾದ ಭೋಜನ ನಡೆಯಲಿದೆ.

    ಗೋವಿನ ಉಳಿವಿನ ಹೊಸ ಪರಿಕಲ್ಪನೆಯೊಂದಿಗೆ ಈ ಕಾರ್ಯಕ್ರಮ‌ ಸಂಯೋಜನೆಗೊಂಡಿದ್ದು ನಾಲ್ಕು ದಿನಗಳ ಕಾಲ ಈ ಆಲೆಮನೆ ಹಬ್ಬ ನಡೆಯಲಿದೆ. ಪ್ರತಿದಿನ ಮಧ್ಯಾಹ್ನ 4 ಗಂಟೆಯಿಂದ ಆಲೆಮನೆ ಹಬ್ಬ ಪ್ರಾರಂಭವಾಗುತ್ತಿದ್ದು ಸಂಜೆ 5:30 ಗಂಟೆಯಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ.

    ಒಂದೇ ವೇದಿಕೆಯಲ್ಲಿ ಎರಡು ಕಬ್ಬಿನಗಾಣದ ಮಧ್ಯೆ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದ್ದು, ಇದರೊಂದಿಗೆ ಕೃಷಿ ಸಹಾಯಕ ಉಪಕರಣಗಳು ಮಾರಾಟ, ಗವ್ಯೋತ್ಪನ್ನಗಳ ಮಾರಾಟ, ಕರಕುಶಲ ಉತ್ಪನ್ನಗಳ ಮಾರಾಟ, ಕಬ್ಬಿನ ಹಾಲಿನ ಮಾರಾಟ, ಬಹು ಜನರ ಬೇಡಿಕೆಯ ತೊಡಾದೇವು, ಬೆಲ್ಲದ ಬಾಳೆದಿಂಡು, ಪಪ್ಪಾಯಿ ಬಾಳೆದಿಂಡು, ಬೆಲ್ಲ , ಕಬ್ಬಿನ ಹಾಲಿನ ಉತ್ಪನ್ನಗಳ ಮಾರಾಟ ನಡೆಯಲಿದೆ.

    ಯಾವುದೇ ನಿರ್ದಿಷ್ಟ ಆದಾಯವಿಲ್ಲದೇ ಅಂದಾಜು 300 ಗೋವುಗಳನ್ನು ಸಂರಕ್ಷಿಸುತ್ತಿರುವ ಅಮೃತಧಾರ ಗೋಶಾಲೆ ಹೊಸಾಡು ಅನಾಥ, ಅಪಘಾತಕ್ಕೀಡಾದ, ಕಸಾಯಿಖಾನೆಯಿಂದ ರಕ್ಷಿಸಲ್ಪಟ್ಟ, ವಯಸ್ಸಾದ ಗೋವುಗಳ ಪಾಲನೆ ಜೊತೆಯಲ್ಲಿ ಭಾರತೀಯ ಗೋ ತಳಿ ಸಂರಕ್ಷಣೆಯನ್ನು ಮಾಡುತ್ತಿದ್ದು ಆಲೆಮನೆ ಹಬ್ಬದ ಸಂಪೂರ್ಣ ಆದಾಯವನ್ನು ಗೋವಿನ ನಿರ್ವಹಣೆಗೆ ವಿನಿಯೋಗಿಸುವ ವಿನೂತನ ಯೋಜನೆ ಇದಾಗಿದೆ. ಇದರ ಜೊತೆಯಲ್ಲಿ ಆಧುನಿಕ ಭರಾಟೆಗೆ ಪಾರಂಪರಿಕ ಸಂಸ್ಕೃತಿ ನಶಿಸುತ್ತಿದ್ದು ಎಲ್ಲಾ ಗೋಪ್ರೇಮಿಗಳನ್ನು ಒಂದೆಡೆ ಸೇರಿಸಿ ಮುಂದಿನ ಪೀಳಿಗೆಗೆ ಗೋ ಸಂರಕ್ಷಣೆಯ ಜಾಗೃತಿ ಪಡಿಸುವ, ಪ್ರಾಚೀನ ಪರಂಪರೆಯನ್ನು ನೆನಪಿಸುವ, ಗೋವಿಗೆ ಸಂತರ್ಪಣೆಗೈಯುವ ಸದಾವಕಾಶ ಕಲ್ಪಿಸುವುದು ಇದರ ಉದ್ದೇಶವಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

  • ಕಡಲಿಗೆ ಇಳಿದು ಪ್ರತಿಭಟನೆ ನಡೆಸಿದ ಮೀನುಗಾರರು

    ಕಡಲಿಗೆ ಇಳಿದು ಪ್ರತಿಭಟನೆ ನಡೆಸಿದ ಮೀನುಗಾರರು

    ಹೊನ್ನಾವರ : ನಿನ್ನೆ ಅಂಕೋಲಾ ತಾಲೂಕಿನ ಕೇಣಿ ಗ್ರಾಮದಲ್ಲಿ ಬಂದರು ನಿರ್ಮಾಣ ವಿರೋಧಿಸಿ ಮೀನುಗಾರರ ತೀವ್ರ ಹೋರಾಟ ನಡೆಸಿದ್ದು, ಇಂದು ಹೊನ್ನಾವರ ತಾಲೂಕಿನ ಕಾಸರಕೋಡಿನಲ್ಲಿ ಬಂದರು ನಿರ್ಮಾಣದ ಸರ್ವೆ ಕಾರ್ಯ ವಿರೋಧಿಸಿ ಮೀನುಗಾರರು ಕಡಲಿಗೆ ಇಳಿದು ಪ್ರತಿಭಟನೆ ನಡೆಸಿದರು. ಇದರಿಂದಾಗಿ ಉತ್ತರ ಕನ್ನಡ ಜಿಲ್ಲೆಯಲ್ಲಿ ನಿರ್ಮಾಣದ ವಿರುದ್ದ ಮೀನುಗಾರರ ಆಕ್ರೋಶ ಹೆಚ್ಚಾಗಿದೆ.

    ಬಂದರು ನಿರ್ಮಾಣದ ಮೂಲಕ ವ್ಯಾಪಾರ ವ್ಯವಹಾರ ವೃದ್ದಿ ಮಾಡಬೇಕು ಎನ್ನುವುದು ಸರ್ಕಾರದ ಚಿಂತನೆಯಾದರೆ ಇನ್ನೊಂದೆಡೆ ತಮ್ಮ ತುತ್ತ ಅನ್ನ ಸಂಪಾದನೆಯ ದುಡಿಮೆಯ ಸ್ಥಳ ಬಂದರಿಗೆ ಬಲಿಯಾಗಲಿದೆ ಎನ್ನುವ ಆತಂಕ ಮೀನುಗಾರಲ್ಲಿ ಉಂಟಾಗಿದೆ. ಮುಂದಿನ ದಿನದಲ್ಲಿ ಈ ಹೋರಾಟ ಯಾವ ಹಾದಿ ಹಿಡಿಯಲಿದೆ ಎನ್ನುವುದು ತಿಳಿಯದಾಗಿದೆ.

    ಹೊನ್ನಾವರ ಪೋರ್ಟ್ ಪ್ರೈವೇಟ್ ಲಿಮಿಟೆಡ್ ಕಂಪನಿ ವತಿಯಿಂದ ಸುಮಾರು 600ಕೋಟಿ ವೆಚ್ಚದಲ್ಲಿ ಬಂದರು ನಿರ್ಮಾಣಕ್ಕೆ ಮುಂದಾಗಿದ್ದು, ಇಂದು ಬಂದರು ರಸ್ತೆ ನಿರ್ಮಾಣ ಸಂಬಂಧ ಸರ್ವೆಗೆ ಜಿಲ್ಲಾಡಳಿತ ಮುಂದಾಗಿತ್ತು. ಮೀನುಗಾರರು ಪ್ರತಿಭಟನೆ ನಡೆಸದಂತೆ ಮುಂಚಿತವಾಗಿ ನಿಷೇದಾಜ್ಞೆ ಹೇರಿದ್ದು ನಿಷೇದಾಜ್ಞೆಗೂ ಲೆಕ್ಕಿಸದ ಮೀನುಗಾರರು ಶಾಲಾ ಮಕ್ಕಳನ್ನ ಕರೆದುಕೊಂಡು ಬಂದು ಪ್ರತಿಭಟನೆಗೆ ಮುಂದಾಗಿದ್ದರು.

    ಮೀನಗಾರರ ಪ್ರತಿಭಟನೆ ಹಿನ್ನಲೆಯಲ್ಲಿ ಸುಮಾರು 50ಕ್ಕೂ ಅಧಿಕ ಮೀನುಗಾರರನ್ನ ಪೊಲೀಸರು ವಶಕ್ಕೆ ಪಡೆದಿದ್ದು, ವಶಕ್ಕೆ ಪಡೆದ ಮೀನುಗಾರರ ಬಿಡುಗಡೆ ಮಾಡುವಂತೆ ಉಳಿದವರು ಪ್ರತಿಭಟನೆ ಮುಂದುವರೆಸಿದ್ದರು.

    ಹೊನ್ನಾವರ ಬಂದರು ನಿರ್ಮಾಣ ಸಂಬಂಧ ಕಳೆದ ಮೂರ್ನಾಲ್ಕು ವರ್ಷದಿಂದ ಹೋರಾಟ ನಡೆಯುತ್ತಲೇ ಇದೆ. ಇಂದು ಬಂದರು ನಿರ್ಮಾಣ ಸಂಬಂಧ ಸರ್ವೆ ಕಾರ್ಯ ಮಾಡಲು ಮುಂದಾದ ವೇಳೆಯಲ್ಲಿ ಮೀನುಗಾರರು ದೊಡ್ಡ ಮಟ್ಟದಲ್ಲಿಯೇ ಪ್ರತಿಭಟನೆಗೆ ಮುಂದಾಗಿದ್ದರು. ಇನ್ನು ಕಡಲಿಗೆ ಇಳಿದು ಮೀನುಗಾರರು ಪ್ರತಿಭಟಿಸಿದ್ದು ಸುಮಾರು ನಾಲ್ವರು ಅಸ್ಥಸ್ಥಗೊಂಡು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.

    ಬಂಧಿತರನ್ನು ಬಿಡದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುವ ಬಗ್ಗೆ ಎಚ್ಚರಿಕೆ ನೀಡಿದ ಬಾಲಕಿ ಅಪೇಕ್ಷಾ

    ಕಾಸರಕೋಡ ಬಂದರು ನಲ್ಲಿ ವಾಣಿಜ್ಯ ಬಂದರು ನಿರ್ಮಾಣ ಸರ್ವೆ ನಡೆಯುತ್ತಿದ್ದು, ಅಲ್ಲಿನ ಮೀನುಗಾರರಿಗೆ ರಕ್ಣಣೆ ನೀಡ ಬೇಕು, ನಮ್ಮ ಸ್ಥಳದಲ್ಲಿ ಯಾವುದೇ ವಾಣಿಜ್ಯ ಬಂದರು ಮಾಡುವಂತಿಲ್ಲಾ ಎಂದು ಮೀನುಗಾರರು ಹೋರಾಟ ಮಾಡುತ್ತಿದ್ದರು. ಈ ಸಂದರ್ಭದಲ್ಲಿ 144 ಸೆಕ್ಷನ್ ಜಾರಿಯಲ್ಲಿದ್ದರೂ ಅಲ್ಲಿ ಮಿನುಗಾರರು ಸರ್ವೆ ಮಾಡಲು ಅಡ್ಡಿ ಪಡಿಸಿದ್ದಕ್ಕೆ ಅವರನ್ನು ಬಂದಿಸಲಾಗಿದೆ. ಆಗ ಕೆಲವು ಮೀನುಗಾರರು ಅತ್ಮ ಹತ್ಯೆಗೆ ಪ್ರಯತ್ನಿಸಿದ್ದು ಅವರ ಜೀವ ರಕ್ಷಣೆ ಮಾಡಲಾಗಿದೆ.

    ಬಂಧಿತ ಮೀನುಗಾರರನ್ನು 4 ಗಂಟೆ ಒಳಗೆ ಬಿಡದಿದ್ದರೆ ಅಪೇಕ್ಷಾ ಎಂಬ ಬಾಲಕಿ ಅತ್ಮಹತ್ಯೆ ಮಾಡಿಕೊಳ್ಳುವದಾಗಿ ತಿಳಿಸಿದ್ದಾರೆ. ನಮಗೆ ನ್ಯಾಯ ಬೇಕು, ಮೀನುಗಾರ ಸಚಿವರಾದ ಮಂಕಾಳ ವೈದ್ಯರು ನಮಗೆ ನಾಯ್ಯ ಕೊಡಿಸಬೇಕು. ಅವರು ಸಚಿವರಾಗುವ ಮೊದಲು ನಮಗೆ ಹೆಳಿದ್ದರು ಯಾವುದೆ ವಾಣಿಜ್ಯ ಬಂದರು ಅಗಲು ಬಿಡುವುದಿಲ್ಲಾ, ನಾನು ನಿಮ್ಮ ಜೊತೆ ಇರುತ್ತೇನೆ ಎಂದವರು ಇವತ್ತು ಇಷ್ಟೊಂದು ಅನ್ಯಾಯ ವಾಗುತ್ತಿದ್ದರೂ ಸಚಿವರು ಸ್ಥಳಕ್ಕೆ ಬರಲಿಲ್ಲಾ ನನ್ನ ಅತ್ಮ ಹತ್ಯೆಗೆ ವಾಣಿಜ್ಯ ಬಂದರು , ಜಿಲ್ಲಾಧಿಕಾರಿಗಳು. ಸಚಿವರಾದ ಮಂಕಾಳ ಎಸ್ ವೈದ್ಯರವರೇ ಕಾರಣ ಎಂದು ಅತ್ಮ ಹತ್ಯೆ ಮಾಡಿ‌ಕೊಳ್ಳುತ್ತೇವೆ ಎಂದು ಅಪೇಕ್ಷಾರವರು ಹೇಳಿದ್ದಾರೆ.

  • ಉತ್ತರಕನ್ನಡದಲ್ಲಿ ತಂಪೆರೆದ ಮಳೆರಾಯ.

    ಉತ್ತರಕನ್ನಡದಲ್ಲಿ ತಂಪೆರೆದ ಮಳೆರಾಯ.

    ಕುಮಟಾ : ಜಿಲ್ಲೆಯ ಹಲವು ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗುತ್ತಿದೆ. ಜಿಲ್ಲೆಯ ಕುಮಟಾ, ಅಂಕೋಲಾ,‌ ಹೊನ್ನಾವರ ಸೇರಿದಂತೆ ಕರಾವಳಿಯ ತಾಲೂಕಿನ ನಗರ ಸೇರಿದಂತೆ ಗ್ರಾಮೀಣ ಭಾಗದಲ್ಲಿ ಮಳೆ ಉಂಟಾಗಿದೆ. ಈ ಮೂಲಕ ಸುಡು ಬಿಸಿಲಿನಿಂದ ಪರಿತಪಿಸುತ್ತಿದ್ದ ಉತ್ತರಕನ್ನಡ ಜಿಲ್ಲೆಯ ಕರಾವಳಿಯಲ್ಲಿ ಮಳೆರಾಯ ತಂಪೆರೆದಿದ್ದಾನೆ.

    ಕಳೆದ ಎರಡು ದಿನಗಳಿಂದ ಭಾರೀ ಮೊಡಕವಿದ ವಾತಾವಣ ಇತ್ತು. ವಿಪರೀತವಾದ ಬಿಸಿಲಿನ ಧಗೆಗೆ ಕಂಗೆಟ್ಟಿದ್ದ ಜನತೆಗೆ ತಂಪಾಗಿಸಿದ ವರುಣ ತಂಪೆರೆದಿದೆ. ಕಳೆದೆರಡು ದಿನಗಳಿಂದ ಘಟ್ಟದ ಮೇಲಿನ ತಾಲ್ಲೂಕುಗಳಲ್ಲಿ ಅಬ್ಬರಿಸಿತ್ತು. ಇಂದು ಬೆಳ್ಳಂಬೆಳಿಗ್ಗೆ ಕುಮಟಾ, ಅಂಕೋಲಾ ಭಾಗದಲ್ಲಿ ಮಳೆ ಸುರಿಯುತ್ತಿದ್ದು ತಂಪೆರೆದಿದೆ.

    ಇನ್ನೂ ಜಿಲ್ಲೆಯಲ್ಲಿ ಎಪ್ರಿಲ್ 22ರ ವರೆಗೆ ಮಳೆ ಸುರಿಯುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಶಿರಸಿ, ಸಿದ್ದಾಪುರ, ಮುಂಡಗೋಡ, ಹಳಿಯಾಳ ಭಾಗದಲ್ಲಿ ಕಳೆದೆರಡು ದಿನಗಳಿಂದ ಭಾರೀ ಮಳೆ ಉಂಟಾಗುತ್ತಿದೆ. ಇನ್ನೂ ಎರಡು ದಿನ ಜಿಲ್ಲೆಯಲ್ಲಿ ಭಾರೀ ಮಳೆ ಸುರಿಯುವ ಬಗ್ಗೆ ಇಲಾಖೆ ಮಾಹಿತಿ ನೀಡಿದೆ.

  • ಪಟಾಕಿ ಸಿಡಿಸಿ, ಸಿಹಿ ಹಂಚಿ ಮೋದಿಗೆ ಜೈ ಅಂದ್ರು ಬಿಜೆಪಿ ಪ್ರಮುಖರು

    ಪಟಾಕಿ ಸಿಡಿಸಿ, ಸಿಹಿ ಹಂಚಿ ಮೋದಿಗೆ ಜೈ ಅಂದ್ರು ಬಿಜೆಪಿ ಪ್ರಮುಖರು

    ಕುಮಟಾ :  ದೇಶ ಮುಖ್ಯ ಎಂಬ ಭಾವನೆ ಜನರಲ್ಲಿ ಬಂದಿದೆ. ಹೀಗಾಗಿ ನರೇಂದ್ರ ಮೋದಿ ಅವರೇ ನಮಗೆ ಗ್ಯಾರೆಂಟಿ. ಆ ಗ್ಯಾರೆಂಟಿಯಿಂದಲೇ ನಾವು ನಮ್ಮ ದೇಶದಲ್ಲಿ ಏಪ್ರಿಲ್ ಮೇ ದಲ್ಲಿ ನಡೆಯುವ ಲೋಕಸಭಾ ಚುನಾವಣೆಯಲ್ಲಿ ಮತ್ತೊಮ್ಮೆ ನರೇಂದ್ರ ಮೋದಿ ಪ್ರಧಾನಿಯಾಗುವ ವಿಶ್ವಾಸ ಬಂದಿದೆ ಎಂದು ಶಾಸಕ ದಿನಕರ ಶೆಟ್ಟಿ ಹೇಳಿದರು ಅವರು ಮೂರು ರಾಜ್ಯಗಳಲ್ಲಿ ಬಿಜೆಪಿ ಗೆಲುವು ಸಾಧಿಸಿದ ನಿಮಿತ್ತ ಕುಮಟಾದ ಗಿಬ್ ವೃತ್ತದಲ್ಲಿ ಹಮ್ಮಿಕೊಂಡ ಸಂಭ್ರಮಾಚರಣೆಯಲ್ಲಿ ಪಾಲ್ಗೊಂಡು ಮಾತನಾಡಿದರು.

    ಕಳೆದ ವಾರ ಉತ್ತರ ಭಾರತದ ಮೂರು ರಾಜ್ಯಗಳಲ್ಲಿ ನಡೆದ ಚುನಾವಣೆಯ ಫಲಿತಾಂಶ ರವಿವಾರ ಬಂದಿದ್ದು, ಮಧ್ಯಪ್ರದೇಶದಲ್ಲಿ ಭಾರತೀಯ ಜನತಾ ಪಾರ್ಟಿ ಅಭೂತಪೂರ್ವ ಜಯ ಸಾಧಿಸಿದೆ, ಜೊತೆಗೆ ರಾಜಸ್ಥಾನದಲ್ಲಿ, ಛತ್ತೀಸ್ಗಡದಲ್ಲಿಯೂ ನಿರೀಕ್ಷೆಗೂ ಮೀರಿ ಬಿಜೆಪಿ ದೊಡ್ಡ ಪ್ರಮಾಣದಲ್ಲಿ ಗೆದ್ದು ಬಂದಿದೆ. ಇದು ಹೆಮ್ಮೆಯ ವಿಚಾರ. ಈ ಚುನಾವಣೆಯಲ್ಲಿ ತೆಲಂಗಾಣದಲ್ಲಿ ಮಾತ್ರ ಕಾಂಗ್ರೆಸ್ ಹತ್ತು ಗ್ರಾಂ ಚಿನ್ನದ ಗ್ಯಾರಂಟಿ ಮೇಲೆ ವಿಜಯ ಸಾಧಿಸಿದ್ದು ಬಿಟ್ಟರೆ ಬೇರೆಲ್ಲಾ ಕಡೆ ಬಿಜೆಪಿ ಜಯ ಗಳಿಸಿದೆ. ಇದು ಶುಭ ಸೂಚನೆ ಎಂದು ಅವರು ಹೇಳಿದರು.

    ಇದೇ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧ್ಯಕ್ಷ ವೆಂಕಟೇಶ ನಾಯಕ ರಾಜಸ್ಥಾನ, ಮಧ್ಯಪ್ರದೇಶ ಮತ್ತು ಛತ್ತೀಸ್ಗಡ ಉತ್ತರ ಭಾರತದ ಅತ್ಯಂತ ನಿರ್ಣಾಯಕ ರಾಜ್ಯಗಳು. ಅದರಲ್ಲಿ ಭಾರತೀಯ ಜನತಾ ಪಾರ್ಟಿ ಕ್ಲೀನ್ ಸ್ವೀಪ್ ಮಾಡಿದೆ. ಇಲ್ಲಿಯ ಐತಿಹಾಸಿಕ ಗೆಲುವು ಬಿಜೆಪಿ ಪರವಾಗಿ ಜನರು ಇಟ್ಟಿರುವ ವಿಶ್ವಾಸವನ್ನು ತೋರಿಸುತ್ತದೆ. ತೆಲಂಗಾಣದಲ್ಲಿಯೂ ಭಾರತೀಯ ಜನತಾ ಪಾರ್ಟಿ ಹತ್ತು ಸ್ಥಾನಕ್ಕೆ ಏರಿದ್ದು ತನ್ನ ನೆಲೆಯನ್ನು ಕಂಡುಕೊಳ್ಳುತ್ತಿದೆ ಎಂದರು. ಉತ್ತರ ಕನ್ನಡದಲ್ಲಿಯು ಮುಂಬರುವ ಲೋಕಸಭಾ ಚುನಾವಣೆಯಲ್ಲಿಯೂ ಗೆಲ್ಲುವ ವಿಶ್ವಾಸವಿದೆ ಯುವ ರಾಜ್ಯಾಧ್ಯಕ್ಷ ವಿಜಯೇಂದ್ರ ಸಾರಥ್ಯದಲ್ಲಿ ಈ ರಾಜ್ಯದಲ್ಲಿ ಚುನಾವಣೆ ಎದುರಿಸಲು ಸಿದ್ಧತೆ ನಡೆಸಿದ್ದೇವೆ. 28ಕ್ಕೆ 28 ಲೋಕಸಭಾ ಕ್ಷೇತ್ರಗಳನ್ನು ಗೆಲ್ಲುವ ವಿಶ್ವಾಸ ನಮಗಿದೆ ಎಂದರು.

    ಈ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತರು ಹಾಗೂ ಮುಖಂಡರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು. ಈ ಸಂದರ್ಭದಲ್ಲಿ ಮಂಡಲಾಧ್ಯಕ್ಷ ಹೇಮಂತ ಕುಮಾರ್ ಗಾಂವಕರ, ವಿಭಾಗ ಪ್ರಮುಖ ಎನ್.ಎಸ್ ಹೆಗಡೆ ಕರ್ಕಿ, ಡಾ. ಜಿ.ಜಿ ಹೆಗಡೆ, ಎಂ.ಎಂ‌ ಹೆಗಡೆ, ಚೇತೇಶ ಶಾನಭಾಗ, ಅನುರಾಧಾ ಬಾಳೇರಿ, ವಿಶ್ವನಾಥ ನಾಯ್ಕ, ಅಶೋಕ ಪ್ರಭು, ಗೋಪಾಲ ಶೆಟ್ಟಿ, ಮಾರುತಿ ಶೆಟ್ಟಿ, ಜಯಾ ಶೇಟ್, ಮೋಹಿನಿ ಗೌಡ ಹಾಗೂ ಪಕ್ಷದ ಜಿಲ್ಲಾ ಹಾಗೂ ಮಂಡಲದ ವಿವಿಧ ಸ್ಥರಗಳ ಪದಾಧಿಕಾರಿಗಳು, ಪ್ರಮುಖರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

    ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇದು ಸೆಮಿಫೈನಲ್ ಮ್ಯಾಚ್, ನಂತರ ಫೈನಲ್ ನಲ್ಲಿಯೂ ನಾವು ಗೆಲ್ಲುತ್ತೇವೆ ಎಂದು ಹೇಳಿದ್ದರು. ಆದರೆ ಬಿಜೆಪಿ ದೊಡ್ಡ ಪ್ರಮಾಣದಲ್ಲಿ ಗೆಲುವು ಸಾಧಿಸಿದೆ. ಫೈನಲ್ ನಲ್ಲಿಯೂ ಬಿಜೆಪಿಯ ಜಯಗಳಿಸಲಿದೆ. – ದಿನಕರ ಶೆಟ್ಟಿ, ಶಾಸಕರು.

    ಕರ್ನಾಟಕದ ಮಾದರಿಯ ಗ್ಯಾರಂಟಿಗಳನ್ನು ಆ ರಾಜ್ಯದಲ್ಲಿಯೂ ತೋರಿಸಿದರೂ, ಅಲ್ಲಿಯ ಜನ ಅದನ್ನು ತಿರಸ್ಕರಿಸಿದ್ದಾರೆ ಅಂದರೆ ಕರ್ನಾಟಕದಲ್ಲಿ ನಡೆಯುವ ದುರಾಡಳಿತದ ಬಗ್ಗೆ ಅವರು ಗಮನಿಸಿದ್ದಾರೆಂದೇ ಅರ್ಥ. – ವೆಂಕಟೇಶ ನಾಯಕ ಬಿಜೆಪಿ ಜಿಲ್ಲಾಧ್ಯಕ್ಷ

  • ಅಡುಗೆಕೋಣೆಯಲ್ಲಿಯೇ ಸ್ಯೂಸೈಡ್ ಮಾಡಿಕೊಂಡ ವಿವಾಹಿತೆ : ಏಳು ತಿಂಗಳ ಮಗುವನ್ನು ಬಿಟ್ಟು ಹೋದ ತಾಯಿ.

    ಅಡುಗೆಕೋಣೆಯಲ್ಲಿಯೇ ಸ್ಯೂಸೈಡ್ ಮಾಡಿಕೊಂಡ ವಿವಾಹಿತೆ : ಏಳು ತಿಂಗಳ ಮಗುವನ್ನು ಬಿಟ್ಟು ಹೋದ ತಾಯಿ.

    ಭಟ್ಕಳ : ಯಾವುದೋ ವಿಷಯವನ್ನು ಮನಸ್ಸಿಗೆ ಹಚ್ಚಿಕೊಂಡು ಅಡುಗೆ ಕೋಣೆಯ ಜಂತಿಗೆ ಮಹಿಳೆಯೊಬ್ಬಳು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗ್ರೆ ಮಾವಿನಕಟ್ಟೆಯಲ್ಲಿ ನಡೆದಿದೆ. ಸುತ್ತಲ ಜನರ ಅಭಿಪ್ರಾಯದಂತೆ ಮಾವಿನಕಟ್ಟಾ ನಿವಾಸಿಯಾದ ನಾಗೇಶ ಎಂಬಾತನಿಗೆ ಮದುವೆಯಾಗಿದ್ದು, ಮದುವೆ ಆದಾಗಿನಿಂದ ಗಂಡನೊoದಿಗೆ ಉತ್ತಮ ರೀತಿಯಲ್ಲಿ ಬದುಕು ಮಾಡಿಕೊಂಡಿದ್ದವಳು. ಇವಳಿಗೆ 7 ತಿಂಗಳ ಗಂಡು ಮಗೂ ಸಹ ಇದೆ. ಯಾವುದೋ ವಿಷಯವನ್ನು ಮನಸ್ಸಿಗೆ ಹಚ್ಚಿಕೊಂಡು ಮಹಿಳೆ, ಮನೆಯ ಅಡುಗೆ ಕೊನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ.

    ಆತ್ಮಹತ್ಯೆ ಮಾಡಿಕೊಂಡ ಮಹಿಳೆಯನ್ನು, ಶೈಲಾ ನಾಗೇಶ ದೇವಾಡಿಗ ಎಂದು ಗುರುತಿಸಲಾಗಿದೆ. ಆತ್ಮಹತ್ಯೆ ಮಾಡಿಕೊಂಡ ಘಟನೆ ಗಮನಿಸಿದ ಮನೆಯವರು ಉರುಳು ಹಾಕಿಕೊಂಡ ಬಟ್ಟೆಯನ್ನು ಕತ್ತರಿಸಿ ಭಟ್ಕಳ, ಸರಕಾರಿ ಆಸ್ಪತ್ರೆಗೆ ಸಾಗಿಸಿದ್ದು ಆಸ್ಪತ್ರೆಯ ವೈದ್ಯರು ತಪಾಸಣೆ ನಡೆಸಿದಾಗ, ಸಾವನ್ನಪ್ಪಿರುವ ಖಚಿತ ಪಡಿಸಿದ್ದಾರೆ ಎನ್ನಲಾಗಿದೆ. ಕುಟುಂಬದಲ್ಲಿ ನೀರವ ಮೌನ ಆವರಿಸಿದೆ. ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಪ್ರಗತಿಯಲ್ಲಿದೆ.

  • ಅಕ್ಷತಾ ಭಟ್ಟ ರಾಜ್ಯ ಮಟ್ಟಕ್ಕೆ ಆಯ್ಕೆ

    ಅಕ್ಷತಾ ಭಟ್ಟ ರಾಜ್ಯ ಮಟ್ಟಕ್ಕೆ ಆಯ್ಕೆ

    ಕುಮಟಾ : ಸ್ಥಳೀಯ ಪ್ರಗತಿ ವಿದ್ಯಾಲಯ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ಅಕ್ಷತಾ ನರಸಿಂಹ ಭಟ್ಟ ಇವಳು ಇಲಾಖಾ ಮಟ್ಟದ ಪ್ರೌಢಶಾಲೆಗಳ ಕರಾಟೆ ಚಾಂಪಿಯನ್ ಶಿಪ್ ನ 64 ಕೆ.ಜಿ ವಿಭಾಗದಲ್ಲಿ ಜಿಲ್ಲಾ ಹಂತದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ಇವಳಿಗೆ ಕರಾಟೆ ಶಿಕ್ಷಕ ಎಸ್.ಪಿ. ಹಂದೆ ಹಾಗೂ ಶಾಲಾ ದೈಹಿಕ ಶಿಕ್ಷಣ ಶಿಕ್ಷಕ ಅರುಣ ನಾಯ್ಕ ತರಬೇತಿ ನೀಡಿದ್ದರು. ಇವಳ ಈ ಸಾಧನೆಗೆ ಶಾಲಾ ಆಡಳಿತ ಮಂಡಳಿ, ಮುಖ್ಯಾಧ್ಯಾಪಕರು, ಪ್ರಾಚಾರ್ಯರು, ಶಿಕ್ಷಕ ವೃಂದದವರು ಅಭಿನಂದಿಸಿದ್ದಾರೆ.

  • ಮನೆಗೆ ಅಳವಡಿಸಿದ್ದ ವಿದ್ಯುತ್ ಮಾಪಕವನ್ನು (ಮೀಟರ್ ) ಎಗರಿಸಿದ ಕಳ್ಳರು.

    ಮನೆಗೆ ಅಳವಡಿಸಿದ್ದ ವಿದ್ಯುತ್ ಮಾಪಕವನ್ನು (ಮೀಟರ್ ) ಎಗರಿಸಿದ ಕಳ್ಳರು.

    ಯಲ್ಲಾಪುರ : ತಾಲೂಕಿನ ಆನಗೋಡಿನಲ್ಲಿ ಮನೆಗೆ ಅಳವಡಿಸಿದ್ದ ವಿದ್ಯುತ್ ಮಾಪಕವನ್ನು (ಮೀಟರ್ )ಕಳ್ಳರು ಕದ್ದೊಯ್ದ ಘಟನೆ ನಡೆದಿದೆ. ಆನಗೋಡಿನ ಕೃಷಿಕ ಭಾಸ್ಕರ ಭಟ್ಟ ಅವರ ಮನೆಗೆ ಹೆಸ್ಕಾಂ ಇಲಾಖೆಯ ವತಿಯಿಂದ ಅಳವಡಿಸಿದ್ದ ವಿದ್ಯುತ್ ಮಾಪಕವನ್ನು ಕಳ್ಳತನ ಮಾಡಲಾಗಿದೆ. ವಿದ್ಯುತ್ ಮಾಪಕವನ್ನು ಕಳ್ಳತನ ಮಾಡಿದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಹೆಸ್ಕಾಂ ಶಾಖಾಧಿಕಾರಿ ಯಲ್ಲಾಪುರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

  • ಎರಡು ದಿನ ಕುಮಟಾ ಹೊನ್ನಾವರ ಕುಡಿಯುವ ನೀರು ಇಲ್ಲ

    ಎರಡು ದಿನ ಕುಮಟಾ ಹೊನ್ನಾವರ ಕುಡಿಯುವ ನೀರು ಇಲ್ಲ

    ಕುಮಟಾ ಪಟ್ಟಣದ ಸಾರ್ವಜನಿಕರಲ್ಲಿ ವಿನಂತಿಸುವುದೇನೆಂದರೆ ಕುಮಟಾ ಹಾಗೂ ಹೊನ್ನಾವರ ಜಂಟಿ ನೀರು ಸರಬರಾಜು ಘಟಕವಾದ ದೀವಳ್ಳಿಯಲ್ಲಿ ಮುಖ್ಯ ಪೈಪ್ ಲೈನ್ ದುರಸ್ತಿ ಕಾರ್ಯ ಇರುವುದರಿಂದ ದಿನಾಂಕ 13-12-2022 ಮತ್ತು14 -12-2022 ರಂದು ಎರಡು ದಿನಗಳ ವರಗೆ ಕುಡಿಯುವ ನೀರು ಇರುವುದಿಲ್ಲ ಹಾಗಾಗಿ ಸಾರ್ವಜನಿಕರು ಸಹಕರಿಸಬೇಕಾಗಿ ವಿನಂತಿ.

    ಪುರಸಭೆ ಮುಖ್ಯ ಅಧಿಕಾರಿ

  • ಉತ್ತರಕನ್ನಡದ ಪ್ರಮುಖ ಎರಡು ಸುದ್ದಿಗಳು ಇಲ್ಲಿದೆ.

    ಉತ್ತರಕನ್ನಡದ ಪ್ರಮುಖ ಎರಡು ಸುದ್ದಿಗಳು ಇಲ್ಲಿದೆ.

    ಸಿದ್ದಾಪುರ: ತಾಲೂಕಿನ ಪಟ್ಟಣದ ಹೊಸೂರಿನ ಲಕ್ಷ್ಮೀನಗರದಲ್ಲಿ ಕೃಷಿ ಕೆಲಸದಲ್ಲಿ ತೊಡಗಿದ್ದಾಗ ವ್ಯಕ್ತಿಯೋರ್ವ ಸ್ಥಳದಲ್ಲಿ ಕುಸಿದು ಬಿದ್ದು ಸಾವನ್ನಪಿದ ಘಟನೆ ಬುಧವಾರ ಬೆಳಿಗ್ಗೆ ನಡೆದಿದೆ ಎಂದು ಸ್ಥಳೀಯ ಪತ್ರಿಕೆ ವರದಿಮಾಡಿದೆ. ಈತ ಕೃಷಿಕನಾಗಿದ್ದು ತೋಟಗಾರಿಕೆ ಹಾಗೂ ಹೈನುಗಾರಿಕೆ ವೃತ್ತಿಯನ್ನು ಮಾಡಿಕೊಂಡಿದ್ದ ಎನ್ನಲಾಗಿದೆ. ಮೃತ ದುರ್ದೈವಿಯನ್ನು ವಸಂತ ಕನ್ನ ನಾಯ್ಕ(43) ಎಂದು ಗುರುತಿಸಲಾಗಿದೆ. ಹುಲ್ಲು ತರಲೆಂದು ಹೋದಾಗ ಕುಸಿದು ಬಿದ್ದು ಮೃತಪಟ್ಟಿರುವುದಾಗಿ ಸಿದ್ದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಿತಿಯಲ್ಲಿ
    ಯುವಕನ ಮೃತದೇಹ ಪತ್ತೆ

    ಮುಂಡಗೋಡ: ತಾಲೂಕಿನ ಸಾಲಗಾಂವ ಗ್ರಾಮದ ಅರಣ್ಯ ಪ್ರದೇಶದಲ್ಲಿ ಮರವೊಂದಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಿತಿಯಲ್ಲಿ ಯುವಕನೋರ್ವನ ಮೃತದೇಹ ಪತ್ತೆಯಾಗಿದೆ. ತಾಲೂಕಿನ ಸಾಲಗಾಂವ ಗ್ರಾಮದ ವೀರೇಂದ್ರ (20) ಮೃತ ಯುವಕ. ಆತ್ಮಹತ್ಯೆಗೆ ಕಾರಣ ಇನ್ನು ತಿಳಿದು ಬಂದಿಲ್ಲ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲಿಸಿ, ಮುಂದಿನ ಕ್ರಮ ಕೈಗೊಂಡಿದ್ದಾರೆ ಎನ್ನಲಾಗಿದೆ.